HEALTH TIPS

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಕೃಷಿ ಕಾನೂನುಗಳನ್ನು ಹಿಂಪಡೆಯುವ ಸಾಧ್ಯತೆ ಇದೆ: ಬಿಜೆಪಿ ನಾಯಕ

Top Post Ad

Click to join Samarasasudhi Official Whatsapp Group

Qries

             ನವದೆಹಲಿ: ಬಿಜೆಪಿ ನಾಯಕರೊಬ್ಬರು ಅಚ್ಚರಿಯ ರೀತಿಯಲ್ಲಿ ಕೇಂದ್ರ ಸರ್ಕಾರದ ಮೂರು ಪ್ರಮುಖ ಕೃಷಿ ಮಸೂದೆಗಳ ವಿರುದ್ಧದ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

          "ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಸನಿಹದಲ್ಲಿದ್ದು, ಇದಕ್ಕೂ ಮುನ್ನ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಸಾಧ್ಯತೆ ಇದೆ" ಎಂದು ಉತ್ತರ ಪ್ರದೇಶ ಬಿಜೆಪಿ ಕಾರ್ಯಸಮಿತಿಯ ಸದಸ್ಯ ರಾಮ್ ಇಕ್ಬಾಲ್ ಸಿಂಗ್ ಹೇಳಿದ್ದಾರೆ.

         ರೈತರ ಬೇಡಿಕೆಗಳು ಸರಿಯಾಗಿವೆ. ವಿಧಾನಸಭಾ ಚುನಾವಣೆ ಹಾಗೂ ರೈತರ ಆಕ್ರೋಶಗಳನ್ನು ಗಮನದಲ್ಲಿಟ್ಟುಕೊಂಡು, ಮೋದಿ ಸರ್ಕಾರ ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯಬಹುದು ಎಂದು ರಾಮ್ ಇಕ್ಬಾಲ್ ಸಿಂಗ್ ಹೇಳಿದ್ದಾರೆ.

         ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಯಿಂದಾಗಿ ಇಬ್ಜೆಪಿ ನಾಯಕರು ಪಶ್ಚಿಮ ಉತ್ತರ ಪ್ರದೇಶದ ಗ್ರಾಮಗಳಿಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ರೈತರು ಅವರನ್ನು ಮುಂದಿನ ದಿನಗಳಲ್ಲಿ ಘೇರಾವ್ ಹಾಕಬಹುದು ಎಂದೂ ರಾಮ್ ಇಕ್ಬಾಲ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

         ಇದೇ ವೇಳೆ ಪೆಗಾಸಸ್ ಗೂಢಚರ್ಯೆ ವಿಷಯವಾಗಿ ಸಂಸತ್ ನಲ್ಲಿ ಚರ್ಚೆಗೆ ಆಗ್ರಹಿಸಿರುವ ಪ್ರತಿಪಕ್ಷಗಳ ಬೇಡಿಕೆಯನ್ನೂ ಸಮರ್ಥಿಸಿಕೊಂಡಿರುವ ರಾಮ್ ಇಕ್ಬಾಲ್ ಸಿಂಗ್, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಪಕ್ಷಗಳ ಬೇಡಿಕೆಗಳನ್ನು ಪರಿಗಣಿಸಬೇಕಾಗುತ್ತದೆ ಎಂದಿದ್ದಾರೆ.

         "ಪ್ರತಿಪಕ್ಷಗಳು ತನಿಖೆಗೆ ಆಗ್ರಹಿಸಿದರೆ, ಸರ್ಕಾರ ಅದಕ್ಕೆ ಒಪ್ಪಿಕೊಳ್ಳಬೇಕಾಗುತ್ತದೆ. ಸಂಸತ್ ಸುಗಮವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ" ಎಂದೂ ರಾಮ್ ಇಕ್ಬಾಲ್ ಸಿಂಗ್ ಹೇಳಿದ್ದಾರೆ.

           ಇದೇ ವೇಳೆ ಕೋವಿಡ್-19 ನ ಮೂರನೆ ಅಲೆ ಎದುರಿಸುವುದರ ಬಗ್ಗೆಯೂ ಮಾತನಾಡಿರುವ ಅವರು, ಎರಡನೇ ಅಲೆಯಿಂದ ಸರ್ಕಾರ ಕಲಿಯಲಿಲ್ಲ, ತಿಂಗಳಾಂತ್ಯಕ್ಕೆ ಎದುರಾಗಲಿರುವ ಮೂರನೇ ಅಲೆಗೆ ಪರಿಣಾಮಕಾರಿಯಾದ ವ್ಯವಸ್ಥೆ ಮಾಡಲಾಗಿಲ್ಲ ಎಂದು ಬಿಜೆಪಿ ನಾಯಕ ಆರೋಪಿಸಿದ್ದಾರೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries