ಟೋಕಿಯೋ: ಕೊರೋನಾ ಸಾಂಕ್ರಾಮಿಕದ ನಡುವೆ ಒಲಂಪಿಕ್ಸ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿದ ಜಪಾನ್‌ನಲ್ಲಿ ಮಂಗಳವಾರ ಪ್ಯಾರಾಲಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದ್ದು, ಜಾವೆಲಿನ್ ಎಸೆತಗಾರ ಟೆಕ್ ಚಾಂದ್ ಅವರು ತ್ರಿವರ್ಣ ಧ್ವಜ ಹಿಡಿದು ಭಾರತವನ್ನು ಮುನ್ನಡೆಸಿದರು.
ಮಂಗಳವಾರ ಜಪಾನ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದೆ ಉದ್ಘಾಟನಾ ಸಮಾರಂಭದಲ್ಲಿ ಟೆಕ್ ಚಾಂದ್ ಭಾರತದ ಧ್ವಜಧಾರಿಯಾಗಿ ತಂಡವನ್ನು ಮುನ್ನಡೆಸಿದರು.
ಭಾರತದ ಧ್ವಜಧಾರಿ ೨೦೧೬ರ ರಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಹೈಜಂಪ್ ಪಟು ಮರಿಯಪ್ಪನ್ ತಂಗವೇಲು ಅವರು ಭಾರತದ ಧ್ವಜವನ್ನು ಹಿಡಿದು ತಂಡವನ್ನು ಮುನ್ನಡೆಸಬೇಕಾಗಿತ್ತು. ಆದರೆ ತಂಗವೇಲು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದರಿಂದ ಅವರ ಬದಲಿಗೆ ಟೆಕ್ ಚಾಂದ್ ಅವರು ಭಾರತ ತಂಡವನ್ನು ಮುನ್ನಡೆಸಿದರು.
ಪ್ಯಾರಾಲಿಂಪಿಕ್ಸ್‌ನಲ್ಲಿ ಮರಿಯಪ್ಪ ಭಾಗವಹಿಸಲು ಯಾವುದೇ ತೊಂದರೆಯಿಲ್ಲ ಎಂದು ಭಾರತದ ಪ್ಯಾರಾಲಿಂಪಿಕ್ಸ್ ತರಬೇತುದಾರ ಸತ್ಯನಾರಾಯಣ ತಿಳಿಸಿದ್ದಾರೆ.
೩೨ನೇ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ ನಿನ್ನೆಯಿಂದ ಸೆಪ್ಟೆಂಬರ್ ೫ ರವರೆಗೆ ಟೋಕಿಯೋದಲ್ಲಿ ನಡೆಯಲಿದೆ.