ತಿರುವನಂತಪುರಂ: ರಾಜ್ಯದಲ್ಲಿ ಭಾನುವಾರ ಲಾಕ್‍ಡೌನ್ ನ್ನು ಮತ್ತೆ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ಭಾನುವಾರ ಯಾವುದೇ ಲಾಕ್‍ಡೌನ್ ಇದ್ದಿರಲಿಲ್ಲ. ಸ್ವಾತಂತ್ರ್ಯ ದಿನಾಚರಣೆ ಹಾಗೂ ಓಣಂ ದಿನದಂದು ಲಾಕ್‍ಡೌನ್ ಹಿಂಪಡೆಯಲಾಗಿತ್ತು. ನಿನ್ನೆ ನಡೆದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಲಾಕ್‍ಡೌನ್ ನ್ನು ಮರು ಜಾರಿಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪ್ರಸ್ತುತ ಜಾರಿಯಲ್ಲಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಯಾವುದೇ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಲಾಗುವುದಿಲ್ಲ. ಅಂಗಡಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ನೀಡಲಾದ ರಿಯಾಯಿತಿಗಳು ಮುಂದುವರಿಯುತ್ತವೆ. ಅಸ್ತಿತ್ವದಲ್ಲಿರುವ ನಿಯಮಾವಳಿಗಳನ್ನು ಉಲ್ಲಂಘಿಸದಂತೆ ಖಚಿತಪಡಿಸಿಕೊಳ್ಳಲು ಕಠಿಣ ತಪಾಸಣೆ ನಡೆಸಲಾಗುತ್ತದೆ.
ಮುಂದಿನ ಭಾನುವಾರ ಲಾಕ್‍ಡೌನ್ ಇರುತ್ತದೆ. ಈಗಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಮೂಲಕ ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.