ನವದೆಹಲಿ: ದೇಶಾದ್ಯಂತ ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಹೈಕೋರ್ಟ್ ಅನುಮತಿ ಅಗತ್ಯ ಸುಪ್ರೀಂ ಕೋರ್ಟ್ ಹೈಕೋರ್ಟ್ ಗೆ ನಿರ್ದೇಶನ ನೀಡಿದೆ. ಪ್ರಸ್ತುತ ಅಧಿಕಾರದಲ್ಲಿರುವವರಿಗೆ ಮತ್ತು ಇಲ್ಲದವರಿಗೆ ಕಾನೂನು ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ಆದೇಶವು ಜಾರಿಗೆ ಬಂದ ಬಳಿಕÀ, ಕೇವಲ ರಾಜ್ಯ ಸರ್ಕಾರದ ನಿರ್ಧಾರದಂತೆ ಪ್ರಕರಣವನ್ನು ಹಿಂಪಡೆಯಲಾಗದು.
ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಸಂಸದರು ಸಲ್ಲಿಸಿದ ಅರ್ಜಿಯಲ್ಲಿ ಅಮಿಕಸ್ ಕ್ಯೂರಿಯ ಶಿಫಾರಸಿನ ಪರವಾಗಿ ನ್ಯಾಯಾಲಯ ತೀರ್ಪು ನೀಡಿದೆ.
ಅಸೆಂಬ್ಲಿ ಗದ್ದಲ ಪ್ರಕರಣದ ತೀರ್ಪನ್ನು ಆಧರಿಸಿ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ. ಸಚಿವ ಶಿವಂಕುಟ್ಟಿ ಸೇರಿದಂತೆ ಆರು ಎಡಪಕ್ಷಗಳ ಶಾಸಕರ ವಿರುದ್ಧದ ಪ್ರಕರಣವನ್ನು ಹಿಂಪಡೆಯುವಂತೆ ಕೇರಳ ಸರ್ಕಾರವು ಅರ್ಜಿ ಸಲ್ಲಿಸಿತ್ತು. ಆದರೆ, ಜನಪ್ರತಿನಿಧಿಗಳ ವಿಶೇಷ ಹಕ್ಕುಗಳು ಸಾರ್ವಜನಿಕ ಕಾನೂನಿನಿಂದ ವಿನಾಯಿತಿ ಪಡೆದಿಲ್ಲ ಎಂದು ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತು.