ಬದಿಯಡ್ಕ: ಶ್ರೀಮದ್ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಶ್ರೀಗಳ ಪ್ರಥಮ ಚಾತುರ್ಮಾಸ್ಯ ಕಾರ್ಯಕ್ರಮದ ಅಂಗವಾಗಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಐದು ದಿನಗಳ ಯಕ್ಷ ಪಂಚಕ ಕಾರ್ಯಕ್ರಮ ಎಡನೀರಿನಲ್ಲಿ ಸಂಪನ್ನಗೊಂಡಿತು.
ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ರವೀಶ ತಂತ್ರಿ ಕುಂಟಾರು, ರಾಜೇಂದ್ರ ಕಲ್ಲೂರಾಯ ಎಡನೀರು, ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು, ಶಂಕರನಾರಾಯಣ ಮಯ್ಯ ಸಿರಿಬಾಗಿಲು, ಸದಾಶಿವ ಭಟ್ ಎದುರ್ಕಳ, ತಿಮ್ಮಪ್ಪ ಮಜಲು, ಕೆ.ಜಗದೀಶ್ ಕೂಡ್ಲು, ಗುರುರಾಜ ಹೊಳ್ಳ ಬಾಯಾರು ಮೊದಲಾದವರು ಉಪಸ್ಥಿತರಿದ್ದರು. ಹಿರಿಯ ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್ ಅವರು ಬ್ರಹ್ಮಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಗಳ ಸಂಸ್ಮರಣೆ ಮಾಡಿದರು.
ಯಕ್ಷ ಪಂಚಕ ಕಾರ್ಯಕ್ರಮದಂಗವಾಗಿ ಕಾಯಕಲ್ಪ, ಇಂದ್ರಕೀಲಕ, ಊರ್ವಶಿ ಶಾಪ, ಸರ್ಫಾಧ್ವರ, ನಳ-ದಮಯಂತಿ ಯಕ್ಷಗಾನ ತಾಳಮದ್ದಳೆ ಸಂಪನ್ನಗೊಂಡಿತು. ಕೊನೆಯ ದಿನ ಮಾರಿಷಾ ಕಲ್ಯಾಣ ಯಕ್ಷಗಾನ ಬಯಲಾಟ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಶ್ರೀ ಸಚ್ಚಿದಾನಂದ ಭಾರತಿ ಶ್ರೀಗಳು ಆಶೀರ್ವಚನ ನೀಡಿದರು. ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ಲಕ್ಷ್ಮೀನಾರಾಯಣ ತಂತ್ರಿ ಕಾವು, ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಉಪಸ್ಥಿತರಿದ್ದರು. ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಬ್ರಹ್ಮಕ್ಯ ಶ್ರೀಗಳ ಬಗ್ಗೆ ಸಂಸ್ಮರಣಾ ಭಾಷಣ ಮಾಡಿದರು. ಕೆ.ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು.