ಕಾಸರಗೋಡು: ಜನಪರ ಯೋಜನೆಯ ಬೆಳ್ಳಿಹಬ್ಬ ಆಚರಣೆಯ ಉದ್ಘಾಟನೆ ಕಾಸರಗೋಡು ನಗರಸಭೆಯಲ್ಲಿ ಜರುಗಿತು. ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷ ನ್ಯಾಯವಾದಿ ವಿ.ಎಂ.ಮುನೀರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ನಗರಸಭೆಯ ಮಾಜಿ ಅಧ್ಯಕ್ಷರುಗಳನ್ನು ಅಭಿನಂದಿಸಲಾಯಿತು. ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಸರಗೋಡು ಬ್ಲಾಕ್ ಪಂಚಾಯಿತಿಯಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸಿದರು. ಬ್ಲೋಕ್ ಪಂಚಾಯತ್ ಅಧ್ಯಕ್ಷೆ ಸಿ.ಎ.ಸೈಮಾ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಾಗಿದ್ದವರನ್ನು ಅಭಿನಂದಿಸಲಾಯಿತು. ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.