ಟೊಕಿಯೋ : ಒಲಿಂಪಿಕ್ಸ್ನಲ್ಲಿ ಭಾರತಕ್ಕೆ 2ನೇ ಪದಕ ದಕ್ಕಿದೆ. ನಿನ್ನೆ ಸೆಮಿ ಫೈನಲ್ನಲ್ಲಿ ಸೋಲುಂಡಿದ್ದ ಪಿ.ವಿ.ಸಿಂಧು ಇಂದು ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಒಲಿಂಪಿಕ್ಸ್ ಇತಿಹಾಸದಲ್ಲಿ ಒಂದಕ್ಕಿಂತ ಹೆಚ್ಚು ಪದಕ ಗೆದ್ದ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಿದ್ದಾರೆ. ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಚೀನಾದ ಹಿ ಬಿಂಗ್ಜಿಯೋ ಅವರನ್ನು ಸೋಲಿಸುವ ಮೂಲಕ ಕಂಚಿನ ಪದಕಕ್ಕೆ ಸಿಂಧು ಮುತ್ತಿಟ್ಟಿದ್ದಾರೆ.
ಇಂದು ನಡೆದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಚೀನಾ ಆಟಗಾರ್ತಿಯನ್ನು 21-13, 21-15 ನೇರ ಸೆಟ್ಗಳಿಂದ ಮಣಿಸುವ ಮೂಲಕ ಕಂಚಿನ ಪದಕವನ್ನು ಸಿಂಧು ತಮ್ಮದಾಗಿಸಿಕೊಂಡಿದ್ದಾರೆ. ಪಿ.ವಿ.ಸಿಂಧು ಒಲಿಂಪಿಕ್ಸ್ನಲ್ಲಿ 2ನೇ ಬಾರಿ ಪದಕ ಗೆಲ್ಲುವ ಮೂಲಕ ಹೊಸ ಸಾಧನೆಗೆ ಪಾತ್ರರಾಗಿದ್ದಾರೆ. 2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್ನಲ್ಲಿ ಸಿಂಧು ಬೆಳ್ಳಿ ಪದಕವನ್ನು ಗೆದ್ದಿದ್ದರು. ಈಗ ಕಂಚಿನ ಪದಕದೊಂದಿಗೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.