ನವದೆಹಲಿ: ಅಫ್ಗಾನಿಸ್ತಾನದಿಂದ ಭಾರತಕ್ಕೆ ಮರಳುತ್ತಿರುವವರಿಗೆ ಉಚಿತವಾಗಿ ಪೋಲಿಯೊ ಲಸಿಕೆ ನೀಡಲು ಭಾರತ ನಿರ್ಧರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಭಾನವಾರ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್‌ನಲ್ಲಿ ಮಾಹಿತಿ ನೀಡಿರುವ ಸಚಿವರು, ದೇಶಕ್ಕೆ ಮರಳುತ್ತಿರುವವರಿಗೆ ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಸಿಕೆ ನೀಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.
ವಿಶ್ವದಲ್ಲಿ ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಮಾತ್ರ ಪೋಲಿಯೊ ರೋಗ ಇದೆ. ಹೀಗಾಗಿ ಭಾರತ ಸರ್ಕಾರ ಅಫ್ಗನ್‌ನಿಂದ ಮರಳುತ್ತಿರುವವರಿಗೆ ಪೋಲಿಯೊ ಲಸಿಕೆ ನೀಡುವ ಕ್ರಮ ತೆಗೆದುಕೊಂಡಿದೆ.
ತಾಲಿಬಾನ್ ಹಿಡಿತದಲ್ಲಿರುವ ಅಫ್ಗಾನಿಸ್ತಾನದಿಂದ ಭಾನುವಾರ ಐಎಎಫ್‌ನ ಸೇನಾ ಸಾರಿಗೆ ವಿಮಾನದ ಮೂಲಕ 107 ಭಾರತೀಯರೂ ಸೇರಿದಂತೆ 168 ಜನರನ್ನು ಭಾರತಕ್ಕೆ ಸ್ಥಳಾಂತರಿಸಲಾಗಿದೆ.