ನವದೆಹಲಿ: ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದರೂ ಸಹ ಭಾರತವು ತನ್ನ ಜನರನ್ನು ಯುದ್ಧ ಪೀಡಿತ ಸನ್ನಿವೇಶವಿರುವ ಅಫ್ಘಾನಿಸ್ತಾನದಿಂದ ಸ್ಥಳಾಂತರಿಸುತ್ತಿದೆ ಮತ್ತು ಅದನ್ನು ಮುಂದುವರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ನವೀಕೃತ ಜಲಿಯನ್ ವಾಲಾ ಬಾಗ್ ಸ್ಮಾರಕ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದರೂ ಸಹ ಭಾರತವು ತನ್ನ ಪೀಲೆಯನ್ನು ಯುದ್ಧ -ಅಫಘಾನಿಸ್ತಾನದಿಂದ ಸ್ಥಳಾಂತರಿಸುತ್ತಿದೆ ಮತ್ತು ಅದನ್ನು ಮುಂದುವರಿಸುತ್ತದೆ ಎಂದು ಹೇಳಿದರು.
ಅಫ್ಘಾನಿಸ್ತಾನದಿಂದ ನೂರಾರು ಭಾರತೀಯರನ್ನು ದೇವಿ ಶಕ್ತಿ ಕಾರ್ಯಾಚರಣೆಯಡಿ ದೇಶಕ್ಕೆ ಕರೆತರಲಾಗಿದೆ. ಅಪ್ಘಾನಿಸ್ತಾನದಲ್ಲಿ ಹಲವು ಸವಾಲುಗಳಿದ್ದು, ಪರಿಸ್ಥಿತಿ ಕಠಿಣವಾಗಿದೆ ಎಂದರು.
ಜಲಿಯನ್ ವಾಲಾ ಬಾಗ್ ದೇಶದ ಸ್ವಾತಂತ್ಯಕ್ಕಾಗಿ ತಮ್ಮ ಪ್ರಾಣವನ್ನೆ ಅರ್ಪಿಸಿದ ಸರ್ದಾರ್ ಉದ್ದಮ್ ಸಿಂಗ್, ಭಗತ್ ಸಿಂಗ್ ಅವರಂತಹ ಅನೇಕ ಕ್ರಾಂತಿಗಳಿಗೆ ಧೈರ್ಯ ಕೊಟ್ಟ ಸ್ಥಳವಾಗಿದೆ ಎಂದು ಪ್ರಧಾನಿ ತಿಳಿಸಿದರು.