ಬದಿಯಡ್ಕ: ಸಾಮಾಜಿಕ ಧಾರ್ಮಿಕ ಹಾಗೂ ಸಾಂಸ್ಕøತಿಕ ಕ್ಷೇತ್ರಗಳಲ್ಲಿ ಅಪಾರ ಜನಮನ್ನಣೆ ಪಡೆದ ಯತಿಶ್ರೇಷ್ಠ ರಲ್ಲಿ ಎಡನೀರು ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು ಪ್ರಮುಖರೆಂದು ಕರ್ನಾಟಕ ಬಂದರು ಹಾಗೂ ಮೀನುಗಾರಿಕಾ ಸಚಿವ ಎಸ್ ಅಂಗಾರ ಹೇಳಿದರು.
ಅವರು ಎಡನೀರು ಶ್ರೀ ಮಠದಲ್ಲಿ ಜರುಗುತ್ತಿರುವ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಭಾನುವಾರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾರಂಭದಲ್ಲಿ ಶ್ರೀಸಚ್ಚಿದಾನಂದ ಸ್ವಾಮೀಜಿಯವರು ಮಾತನಾಡಿ ಕಾಸರಗೋಡು ಪ್ರದೇಶದ ಕನ್ನಡಿಗರ ಸಮಸ್ಯೆಯನ್ನು ಪರಿಹರಿಸಲು ಸಚಿವರು ಮುತುವರ್ಜಿ ವಹಿಸಬೇಕೆಂದು ತಿಳಿಸಿದರು. ಹಿರಿಯ ವೈದ್ಯ ಡಾ. ಬಿ. ಎಸ್ .ರಾವ್ ಸಭೆಯಲ್ಲಿ ಉಪಸ್ಥಿತರಿದ್ದರು. ರಾಜೇಂದ್ರ ಕಲ್ಲೂರಾಯ ಸ್ವಾಗತಿಸಿ, ವೇಣುಗೋಪಾಲ್ ವಂದಿಸಿದರು. ರವೀಶ ತಂತ್ರಿ ಕುಂಟಾರು ಕಾರ್ಯಕ್ರಮ ನಿರೂಪಿಸಿದರು.ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಉದಯೋನ್ಮುಖ ಸಂಗೀತ ಕಲಾವಿದ ಕೀರ್ತನ್ ಹೊಳ್ಳ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು.