ತಿರುವನಂತಪುರಂ: ಮುಂದಿನ ವಾರದಿಂದ ರಾಜ್ಯದಲ್ಲಿ ರಾತ್ರಿ ಕಫ್ರ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಕಫ್ರ್ಯೂ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಇರುತ್ತದೆ. ಕೋವಿಡ್ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ನಾಳೆ ಭಾನುವಾರ ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿದೆ. ಸಾಪ್ತಾಹಿಕ ದರ ಏಳಕ್ಕಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಲಾಕ್‍ಡೌನ್ ವಿಧಿಸಲಾಗುವುದು ಎಂದು ಸಿಎಂ ಹೇಳಿದರು.