ಮಂಜೇಶ್ವರ: ಸ್ಥಳೀಯ ಶಾಸಕರ ಕ್ಷೇತ್ರ ಅಭಿವೃದ್ಧಿ ನಿಧಿಯಿಂದ ಮಂಜೇಶ್ವರ ರಾಷ್ಟ್ರಕವಿ ಗೋವಿಂದ ಪೈ ಅವರ ನಿವಾಸ ಗಿಳಿವಿಂಡುವಿನಲ್ಲಿ ನೂತನವಾಗಿ ನಿರ್ಮಿಸುವ ವಾಚನಾಲಯ ಕಟ್ಟಡದ ಶಿಲಾನ್ಯಾಸವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ನೆರವೇರಿಸಿದರು.
ಪ್ರಾದೇಶಿಕ ಅಭಿವೃದ್ಧಿ ಅಧಿಕಾರಿ ಅತುಲ್ ನಿವಾಸ್‍ರಾಜ್ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ಜೀನ್ ಲವೀನಾ ಮೊಂತೆರೋ ಭಾಗವಹಿಸಿದರು. ಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ ಕೆ.ಆರ್.ಜಯಾನಂದ ಸ್ವಾಗತಿಸಿ, ಬಾಲಕೃಷ್ಣ ಶೆಟ್ಟಿಗಾರ್ ವಂದಿಸಿದರು.