ತಿರುವನಂತಪುರಂ: ರಾಜ್ಯದಲ್ಲಿ ಇಂದು 15,951 ಮಂದಿ ಜನರಿಗೆ ಕೋವಿಡ್ -19 ದೃಢಪಟ್ಟಿದೆ. ಎರ್ನಾಕುಳಂ 2572, ತಿರುವನಂತಪುರ 1861, ತ್ರಿಶೂರ್ 1855, ಕೊಟ್ಟಾಯಂ 1486, ಕೋಝಿಕ್ಕೋಡ್ 1379, ಮಲಪ್ಪುರಂ 1211, ಪಾಲಕ್ಕಾಡ್ 1008, ಆಲಪ್ಪುಳ 985, ಕೊಲ್ಲಂ 954, ಇಡುಕ್ಕಿ 669, ಕಣ್ಣೂರು 646, ಪತ್ತನಂತಿಟ್ಟ 623, ವಯನಾಡ್ 502 ಮತ್ತು ಕಾಸರಗೋಡು 200 ಎಂಬಂತೆ ವರದಿಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,03,484 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕು ಜನಸಂಖ್ಯೆ ಅನುಪಾತವು (WIPR) 10 ಕ್ಕಿಂತ ಹೆಚ್ಚಿನ 422 ಸ್ಥಳೀಯ ಸಂಸ್ಥೆಗಳಲ್ಲಿ 841 ವಾರ್ಡ್‌ಗಳನ್ನು ಒಳಗೊಂಡಿದೆ. ಇಲ್ಲಿ ಕಠಿಣ ನಿಯಂತ್ರಣ ಇರುತ್ತದೆ.
ಪ್ರಸ್ತುತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 4,74,901 ಮಂದಿ ಜನರು ಕಣ್ಗಾವಲಿನಲ್ಲಿ ಇದ್ದಾರೆ. ಈ ಪೈಕಿ 4,53,119 ಮಂದಿ ಮನೆ / ಸಾಂಸ್ಥಿಕ ಕ್ವಾರಂಟೈನ್ ಮತ್ತು 21,782 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಒಟ್ಟು 1312 ಮಂದಿ ಜನರನ್ನು ಹೊಸದಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಪ್ರಸ್ತುತ, 1,63,280 ಕೋವಿಡ್ ಪ್ರಕರಣಗಳಲ್ಲಿ, ಕೇವಲ 12.1 ಪ್ರತಿಶತದಷ್ಟು ಜನರು ಮಾತ್ರ ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕೋವಿಡ್ ಬಾಧಿಸಿ ಕಳೆದ 24 ಗಂಟೆಗಳಲ್ಲಿ 165 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 24,603 ಕ್ಕೆ ಏರಿಕೆಯಾಗಿದೆ.
ಇಂದು, ಸೋಂಕು ಪತ್ತೆಯಾದವರಲ್ಲಿ 70 ಮಂದಿ ರಾಜ್ಯದ ಹೊರಗಿಂದ ಬಂದವರು. ಸಂಪರ್ಕದ ಮೂಲಕ ಒಟ್ಟು 15,191 ಮಂದಿ ಜನರಿಗೆ ಸೋಂಕು ತಗುಲಿದೆ. 617 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. 73 ಆರೋಗ್ಯ ಕಾರ್ಯಕರ್ತರಿಗೂ ಸೋಂಕು ಪತ್ತೆಯಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ ಒಟ್ಟು 17,658 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 2096, ಕೊಲ್ಲಂ 117, ಪತ್ತನಂತಿಟ್ಟ 734, ಆಲಪ್ಪುಳ 1360, ಕೊಟ್ಟಾಯಂ 1407, ಇಡುಕ್ಕಿ 956, ಎರ್ನಾಕುಳಂ 635, ತ್ರಿಶೂರ್ 4764, ಪಾಲಕ್ಕಾಡ್ 734, ಮಲಪ್ಪುರಂ 1328, ಕೋಝಿಕ್ಕೋಡ್ 1661, ವಯನಾಡ್ 968, ಕಣ್ಣೂರು 600 ಮತ್ತು ಕಾಸರಗೋಡು 298 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 1,63,280 ಮಂದಿ ಜನರಿಗೆ ಸೋಂಕು ಇರುವುದು ಪತ್ತೆಯಾಗಿದ್ದು, ಅವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 44,41,430 ಮಂದಿ ಈವರೆಗೆ ಕೋವಿಡ್‌ನಿಂದ ಮುಕ್ತರಾಗಿದ್ದಾರೆ.