ಅಹಮದಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಂತೆಯೇ ವಿಜಯ್ ರೂಪಾನಿ ಅಚ್ಚರಿ ರೀತಿಯಲ್ಲಿ ನಿರ್ಗಮನದ ನಂತರ ಮೊದಲ ಬಾರಿಗೆ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಸೋಮವಾರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.
ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದ ಪಟೇಲ್(59) ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಅಚಾರ್ಯ ದೆವವ್ರತಾ ಭೂಪೇಂದ್ರ ಪಟೇಲ್ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಕೆಲ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಇಂದು ಪಟೇಲ್ ಮಾತ್ರ ಪ್ರಮಾಣ ವಚನ ಸ್ವೀಕರಿಸಿದರು, ಇನ್ನೂ ಕೆಲವೇ ದಿನಗಳಲ್ಲಿ ಸಂಪುಟ ಸೇರಲಿರುವ ಸಚಿವರ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದು ಬಿಜೆಪಿ ಮೂಲಗಳು ಹೇಳಿವೆ.