HEALTH TIPS

ಕೋವಿಡ್-19: ದೇಶದಲ್ಲಿಂದು 37,875 ಹೊಸ ಕೇಸ್ ಪತ್ತೆ, 369 ಮಂದಿ ಸಾವು

       ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 37,875 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 369 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

        ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,30,96,718ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,41,411ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

       ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,91,256ಕ್ಕೆ ತಲುಪಿದೆ.

        ಈ ನಡುವೆ ಕಳೆದ 24 ಗಂಟೆಗಳಲ್ಲಿ 39,114 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,22,64,051ಕ್ಕೆ ತಲುಪಿದೆ. 

        ಭಾರತದಲ್ಲಿ ಒಂದೇ 15,26,056 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 53,31,89,348 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

         ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

        ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 70,75,43,018 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries