ನವದೆಹಲಿ: ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,766 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 308 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಭಾನುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,29,88,673ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 440533ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 410048ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 38,091 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,21,38,092ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 17,47,476 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 53,00,58,218 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 68,46,69,521 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.