ನವದೆಹಲಿ: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಎರಡು ದಿನಗಳಿಂದ ಮತ್ತೆ 30,000 ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ 31,382 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ದೇಶದಲ್ಲಿ ಒಂದೇ ದಿನ 32,542 ಮಂದಿ ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇದೇ ಅವಧಿಯಲ್ಲಿ 318 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 3,00,162ಕ್ಕೆ ಇಳಿಮುಖವಾಗಿದೆ. ಇದರ ಹೊರತಾಗಿ ದೇಶದಲ್ಲಿ 3,28,48,273 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಗೊತ್ತಾಗಿದೆ.
ಕೊರೊನಾವೈರಸ್ ಸೋಂಕಿನ ಪರೀಕ್ಷೆ
ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 15,65,696 ಜನರಿಗೆ ಕೊವಿಡ್-19 ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 55,99,32,709 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.
84.15 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 84.15 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 250 ದಿನಗಳಾಗಿದೆ. ಕಳೆದ 24 ಗಂಟೆಗಳಲ್ಲಿ 72,20,642 ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದ್ದು, ಈವರೆಗೂ 84,15,18,026 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 81,39,33,785 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಹಂತವಾರು ಲಸಿಕೆ ವಿತರಣೆ ಪ್ರಮಾಣ ಎಷ್ಟಿದೆ? ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,70,538 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 87,99,476 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,47,928 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,47,16,085 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
18 ವರ್ಷ ಮೇಲ್ಪಟ್ಟ 34,05,90,440 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,88,05,465 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,44,27,846 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,21,67,362 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 62,24,19,377 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 21,84,01,813 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ
2021ರ ಸಪ್ಟೆಂಬರ್ 24ರ ಅಂಕಿ-ಅಂಶಗಳ ಪ್ರಕಾರ, 81,39,33,785 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
* ಪೂರೈಕೆಯಾದ ಲಸಿಕೆ ಪ್ರಮಾಣ - 81,39,33,785
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 85,92,550
* ಕೊವಿಡ್-19 ಲಸಿಕೆಯ ಲಭ್ಯತೆ - 4,23,43,720