ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಅವರು ದೆಹಲಿಯಲ್ಲಿ ಶನಿವಾರ ಸಂಜೆ ನಡೆದ ಸಮಾರಂಭದಲ್ಲಿ ಸಾಹಿತಿ ಎಂ.ವೀರಪ್ಪ ಮೊಯಿಲಿ ಅವರಿಗೆ 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಿದರು.
ಮೊಯಿಲಿ ಅವರ 'ಶ್ರೀ ಬಾಹುಬಲಿ ಅಹಿಂಸಾ ದಿಗ್ವಜಯಂ' ಕೃತಿಗೆ ಅಕಾಡೆಮಿಯ ಪ್ರಶಸ್ತಿ ದೊರೆತಿದೆ.