ಮುಂಬೈ: ವಾಣಿಜ್ಯ ನಗರಿ ಮುಂಬೈಯ ಕಿಂಗ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ 23 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಈ ಎಲ್ಲಾ ವಿದ್ಯಾರ್ಥಿಗಳು ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದರು. ಆದಾಗ್ಯೂ, ಇದೀಗ ಸೋಂಕು ತಗುಲಿದ್ದು, ಕೆಲವರು ಸೋಂಕಿನ ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ. ಕಾಲೇಜಿನಲ್ಲಿ ನಡೆದ ಕೆಲ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳಿಂದ ಸೋಂಕು ಹರಡಿರುವ ಸಾಧ್ಯತೆಯಿರುವುದಾಗಿ ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಹೇಳಿದ್ದಾರೆ.
ಸೋಂಕು ತಗುಲಿದ ಇಬ್ಬರು ವಿದ್ಯಾರ್ಥಿಗಳನ್ನು ನಗರದ ಸೆವೆನ್ ಹಿಲ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳು ಕ್ವಾರಂಟೈನ್ ನಲ್ಲಿ ಇರಲು ತಿಳಿಸಲಾಗಿದೆ. ಕಿಂಗ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ಒಟ್ಟಾರೇ, 1,100 ವಿದ್ಯಾರ್ಥಿಗಳು ಎಂಬಿಬಿಎಸ್ ಕೋರ್ಸ್ ಅಧ್ಯಯನ ಮಾಡುತ್ತಿದ್ದಾರೆ.