ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 25 ಸಾವಿರದ 404 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 339 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 32 ಲಕ್ಷದ 89 ಸಾವಿರದ 579ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4 ಲಕ್ಷದ 43 ಸಾವಿರದ 213ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 3 ಲಕ್ಷದ 62 ಸಾವಿರದ 207 ಆಗಿದೆ.ಈ ನಡುವೆ ಕಳೆದ 24 ಗಂಟೆಗಳಲ್ಲಿ 37 ಸಾವಿರದ 127 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3 ಕೋಟಿಯ 24 ಲಕ್ಷದ 84 ಸಾವಿರದ 159ಕ್ಕೆ ತಲುಪಿದೆ.
ಭಾರತದಲ್ಲಿ ಇದುವರೆಗೆ 54 ಕೋಟಿಯ 44 ಲಕ್ಷ ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ದೇಶಾದ್ಯಂತ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 75 ಕೋಟಿಯ 22 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ.