ರಾಜ್ಯಗಳಿಗೆ ಕೋವಿಡ್ ವಿರುದ್ಧದ ಲಸಿಕೆ ಪೂರೈಕೆ ಮಾಡುವ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. 18-44 ವರ್ಷದ ವಯೋಮಿತಿಯ ಎಲ್ಲರಿಗೂ ದೇಶದಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
ಕೋವಿಡ್ ಲಾಕ್‌ಡೌನ್ ಬಳಿಕ ರಾಜ್ಯಗಳಲ್ಲಿ ಆರ್ಥಿಕ ಚಟುವಟಿಕೆಗಳು ಪುನಃ ಆರಂಭವಾಗಿವೆ. ಎಲ್ಲಾ ಜನರಿಗೂ ಕೋವಿಡ್ ಲಸಿಕೆ ನೀಡುವ ನಿಟ್ಟಿನಲ್ಲಿ ರಾಜ್ಯಗಳು ಗಮನಹರಿಸಿವೆ. ಇದಕ್ಕಾಗಿ ಅಭಿಯಾನವನ್ನು ಸಹ ಮಾಡಲಾಗುತ್ತಿದೆ.
ದೇಶದಲ್ಲಿ ಶಾಲೆಗಳನ್ನು ಇನ್ನೂ ಆರಂಭಿಸಿಲ್ಲ. ರೈಲುಗಳು ಪೂರ್ಣ ಪ್ರಮಾಣದಲ್ಲಿ ಸಂಚಾರ ನಡೆಸುತ್ತಿಲ್ಲ. ಕೋವಿಡ್ ನಮ್ಮ ನಡುವೆಯೇ ಇದ್ದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಸ್ಯಾನಿಟೈಸ್ ಮಾಡುವುದನ್ನು ಜನರು ಮರೆಯುವಂತಿಲ್ಲ.