ತಿರುವನಂತಪುರಂ: ರಾಜ್ಯದ ಎಲ್ಲಾ ಪೋಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಸಂಪೂರ್ಣವಾಗಿ ಅಳವಡಿಸಲಾಗುವುದು. 520 ಪೋಲೀಸ್ ಠಾಣೆಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ `41.60 ಕೋಟಿ ಮೊತ್ತವನ್ನು ಮಂಜೂರು ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಅನುಸಾರ ಇಂತಹ ಕ್ರಮಕ್ಕೆ ಮುಂದಾಗಲಾಗಿದೆ.
ಕಳೆದ ವರ್ಷ ಸುಪ್ರೀಂ ಕೋರ್ಟ್ ಕೇಂದ್ರೀಯ ತನಿಖಾ ಸಂಸ್ಥೆಗಳು ಮತ್ತು ಪೋಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಆದೇಶಿಸಿತ್ತು. ಸಿಸಿಟಿವಿ ಅಳವಡಿಕೆಗೆ ಹಣ ಬಿಡುಗಡೆ ಮಾಡುವಂತೆ ಮತ್ತು ಆರು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಪೋಲೀಸರು ಮತ್ತು ಕಾನೂನು- ಸುವ್ಯವಸ್ಥೆ ರಾಜ್ಯದ ವಿಷಯವಾಗಿದೆ. ಆದ್ದರಿಂದ, ಪೋಲೀಸ್ ಪಡೆಯ ಆಧುನೀಕರಣಕ್ಕಾಗಿ ರಾಜ್ಯಗಳಿಗೆ ಸಹಾಯದ ಪಟ್ಟಿಯಲ್ಲಿ ನಿಧಿಯನ್ನು ಸೇರಿಸಲಾಗಿದೆ.