ನವದೆಹಲಿ: ದೇಶದಲ್ಲಿ ಇದುವರೆಗೆ ಸುಮಾರು 73 ಕೋಟಿ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ತಾತ್ಕಾಲಿಕ ವರದಿಯ ಪ್ರಕಾರ, ಶುಕ್ರವಾರ ಸಂಜೆ 7 ಗಂಟೆಯವರೆಗೆ 56 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ.
ತಡರಾತ್ರಿಯವರೆಗೆ ದಿನದ ಅಂತಿಮ ವರದಿಗಳ ಬಂದರೆ ದೈನಂದಿನ ವ್ಯಾಕ್ಸಿನೇಷನ್ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಸಚಿವಾಲಯ ತಿಳಿಸಿದೆ.
ಕೊರೋನಾದಿಂದ ದೇಶದ ಅತ್ಯಂತ ದುರ್ಬಲ ಜನಸಂಖ್ಯೆಯ ಸಮುದಾಯವನ್ನು ರಕ್ಷಿಸುವ ಸಾಧನವಾಗಿ ಲಸಿಕೆ ಹಾಕಲಾಗುತ್ತಿದೆ ಮತ್ತು ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಪ್ರಕರಣಗಳ ಏರಿಕೆಯ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಕೇರಳ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವುದನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ.
ಮಕ್ಕಳ ಆರೈಕೆಗಾಗಿ ಹಾಸಿಗೆ ಸಾಮರ್ಥ್ಯವನ್ನು ಹೆಚ್ಚಿಸಬೇಕು ಮತ್ತು "ಕೋವಿಡ್ ಎಮರ್ಜೆನ್ಸಿ ರೆಸ್ಪಾನ್ಸ್ ಪ್ಯಾಕೇಜ್ II" ಅಡಿಯಲ್ಲಿ ಬೆಂಬಲಿತ ಸೌಲಭ್ಯಗಳನ್ನು ಮೋದಿ ಪರಿಶೀಲಿಸಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಪ್ರಧಾನಿ ಸೂಚಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ
.