HEALTH TIPS

ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು: 86 ಕೋಟಿಗೂ ಅಧಿಕ ಡೋಸ್ ನೀಡಿಕೆ, ಒಂದೇ ದಿನ 1 ಕೋಟಿ ಡೋಸ್

       ನವದೆಹಲಿ: ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಮತ್ತೊಂದು ಮೈಲಿಗಲ್ಲನ್ನು ದಾಟಿದೆ, ಇದುವರೆಗೆ ಒಟ್ಟು 86 ಕೋಟಿಗಿಂತಲೂ ಅಧಿಕ ಡೋಸ್  ಲಸಿಕೆ ನೀಡಲಾಗಿದೆ. ಇದು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮತ್ತೊಂದು ಸಾಧನೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕಳೆದ 24 ಗಂಟೆಗಳಲ್ಲಿ 38 ಲಕ್ಷ 18 ಸಾವಿರಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.

        ದೇಶಕ್ಕೆ ಅಭಿನಂದನೆಗಳು, ಒಂದೇ ದಿನ 1 ಕೋಟಿ ಕೋವಿಡ್-19 ಲಸಿಕೆ ಡೋಸ್ ಗಳನ್ನು ನೀಡಿದ್ದೇವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಕೋವಿಡ್ ಲಸಿಕೆ ವಿತರಣೆಯಲ್ಲಿ ಭಾರತ ಮಹತ್ವದ ಮೈಲಿಗಲ್ಲನ್ನು 5ನೇ ಬಾರಿ ಸಾಧಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.

      ನಿನ್ನೆ ಮೊದಲ ಬಾರಿಗೆ ದೇಶದಲ್ಲಿ ಕೋವಿಡ್-19 ಲಸಿಕೆ ಅಭಿಯಾನ ಆರಂಭವಾದ ನಂತರ 1 ಕೋಟಿ ದಾಟಿದೆ. ಈ ವರ್ಷ ಜನವರಿ 16ರಂದು ದೇಶಾದ್ಯಂತ ಕೋವಿಡ್-19 ಲಸಿಕೆ ಅಭಿಯಾನ ಆರಂಭವಾಗಿದ್ದು ಆರೋಗ್ಯ ವಲಯ ಕಾರ್ಯಕರ್ತರಿಗೆ ಮೊದಲ ಬಾರಿ ಲಸಿಕೆ ನೀಡಲಾಯಿತು. 

       ಮುಂಚೂಣಿ ವಲಯದಲ್ಲಿ ಕೆಲಸ ಮಾಡುವ ಕಾರ್ಯಕರ್ತರಿಗೆ ಫೆಬ್ರವರಿ 2ರಂದು ಆರಂಭವಾಗಿತ್ತು.ಮುಂದಿನ ಹಂತದ ಕೋವಿಡ್-19 ಲಸಿಕೆ ಅಭಿಯಾನ ಮಾರ್ಚ್ 1ರಂದು ಆರಂಭವಾಗಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಹಾಗೂ ನಂತರ ಏಪ್ರಿಲ್ 1ರಿಂದ ಹಂತಹಂತವಾಗಿ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನೀಡಲಾಯಿತು.

      ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆಲ್ಲರಿಗೂ ಕೋವಿಡ್-19 ಲಸಿಕೆ ನೀಡಲು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿತು. ದೇಶದಲ್ಲಿ ೧೮ ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಕೇಂದ್ರ ಸರ್ಕಾರದಿಂದ ಉಚಿತ ಕೋವಿಡ್-೧೯ ಲಸಿಕೆ ನೀಡುವ ಅಭಿಯಾನ ಮುಂದುವರಿಯುತ್ತಿದ್ದು, ಎಲ್ಲ ಅರ್ಹರು ಲಸಿಕೆ ಹಾಕಿಸಿಕೊಳ್ಳಬೇಕೆಂದು ಹಾಗೂ ಇತರರು ಲಸಿಕೆ ಪಡೆಯಲು ನೆರವಾಗಬೇಕೆಂದು ಸರ್ಕಾರ ಮನವಿ ಮಾಡುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries