HEALTH TIPS

ಭಾರತದಲ್ಲಿ ಬೂಸ್ಟರ್ ಡೋಸ್ ಅಲ್ಲ, ಎರಡು ಡೋಸ್ ಲಸಿಕೆಗೆ ಮೊದಲ ಆದ್ಯತೆ

                   ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಮೂರನೇ ಅಲೆ ನಡುವೆ ಬೂಸ್ಟರ್ ಡೋಸ್ ನೀಡಬೇಕೇ ಬೇಡವೇ ಎನ್ನುವರ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಇದರ ಮಧ್ಯೆ ದೇಶದಲ್ಲಿ ಮೊದಲ ಎರಡು ಡೋಸ್ ಲಸಿಕೆ ವಿತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಜ್ಞರು ಹೇಳುತ್ತಿದ್ದಾರೆ.


              ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 244 ದಿನಗಳಾಗಿದ್ದು, ಗುರುವಾರ ರಾತ್ರಿ 7 ಗಂಟೆ ವೇಳೆಗೆ 57,11,488 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 74,25,94,875 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.

                  ಭಾರತದಲ್ಲಿ ಈವರೆಗೂ 77,17,36,406 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದ್ದು, ದೇಶದಲ್ಲಿ ಇದುವರೆಗೂ 58,21,13,634 ಮಂದಿಗೆ ಮೊದಲ ಡೋಸ್ ಹಾಗೂ 18,96,22,772 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

                                  ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?

           ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

                             ಕೊವಿಡ್-19 ಲಸಿಕೆ ವಿತರಣೆ ಪ್ರಮಾಣ ಎಷ್ಟಿದೆ?

              ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,66,083 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 86,53,733 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,40,933 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,42,52,816 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

                 18 ವರ್ಷ ಮೇಲ್ಪಟ್ಟ 31,17,09,349 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 5,04,60,225 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 14,68,80,596 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,55,94,624 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 58,21,13,634 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 18,96,22,772 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

                             ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಪೂರೈಕೆ ಎಷ್ಟಿದೆ?

                2021ರ ಸೆಪ್ಟೆಂಬರ್ 16ರ ಅಂಕಿ-ಅಂಶಗಳ ಪ್ರಕಾರ, 76,11,49,825 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಕಳುಹಿಸಲಾಗಿರುವ ಲಸಿಕೆಯ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 76,11,49,825

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 1,65,76,510

* ಕೊವಿಡ್-19 ಲಸಿಕೆಯ ಲಭ್ಯತೆ - 5,33,75,475

ಕಳೆದೊಂದು ದಿನದಲ್ಲಿ 30,570 ಮಂದಿಗೆ ಕೊವಿಡ್-19

               ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 30,570 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 38,303 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 431 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,33,47,325ಕ್ಕೆ ಏರಿಕೆಯಾಗಿದೆ. ಇದುವರೆಗೂ 3,25,60,474 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಬಲಿಯಾದವರ ಸಂಖ್ಯೆ 4,43,928ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ದೇಶದಲ್ಲಿ 3,42,923 ಸಕ್ರಿಯ ಪ್ರಕರಣಗಳು ವರದಿಯಾಗಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries