ತಿರುವನಂತಪುರಂ: ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸಲು ಸಿದ್ಧತೆಗಳನ್ನು ಆರಂಭಿಸಲಾಗಿದೆ ಎಂದು ಶಿಕ್ಷಣ ಸಚಿವ ವಿ.ಶಿವಂಕುಟ್ಟಿ ಹೇಳಿದ್ದಾರೆ. ಸರ್ಕಾರ ಘೋಷಿಸಿದ ತಕ್ಷಣ ಶಾಲೆಗಳು ಮತ್ತೆ ತೆರೆಯಲ್ಪಡುತ್ತವೆ. ಮುಖ್ಯಮಂತ್ರಿ ನೇತೃತ್ವದ ಉನ್ನತ ಮಟ್ಟದ ಸಮಿತಿಯಿಂದ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ಶಾಲೆ ಪುನರಾರಂಭಕ್ಕೆ ತಯಾರಾಗಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಇದೇ ವೇಳೆ,ಶಿಕ್ಷಣ ಇಲಾಖೆಯು ಶಿಕ್ಷಕರು, ಶಿಕ್ಷಕೇತರರು ಮತ್ತು ಶಾಲಾ ವಾಹನಗಳ ಚಾಲಕರು ಕನಿಷ್ಠ ಒಂದು ಡೋಸ್ ಲಸಿಕೆಯನ್ನು ಪಡೆಯುವಂತೆ ಶಿಫಾರಸು ಮಾಡಿದೆ.