HEALTH TIPS

ಶೀಘ್ರದಲ್ಲೇ ಹೊಸ ಸಹಕಾರ ನೀತಿ: ಅಮಿತ್ ಶಾ

                 ನವದೆಹಲಿ: ಕೇಂದ್ರ ಸರ್ಕಾರವು ಶೀಘ್ರದಲ್ಲೇ ಹೊಸ ಸಹಕಾರ ನೀತಿಯನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ ಅವರು ಶನಿವಾರ ಹೇಳಿದ್ದಾರೆ.

                 ಸಹಕಾರ ಚಳವಳಿ ಬಲಪಡಿಸಲು ಕೇಂದ್ರ ಸರ್ಕಾರವು ರಾಜ್ಯಗಳ ಜೊತೆಗೂಡಿ ಕೆಲಸ ಮಾಡಲಿದೆ ಎಂದೂ ಅವರು ತಿಳಿಸಿದ್ದಾರೆ. ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹೊಸದಾಗಿ ಸಹಕಾರ ಖಾತೆ ರಚಿಸಲಾಗಿದ್ದು, ಜುಲೈನಲ್ಲಿ ಸಹಕಾರ ಸಚಿವಾಲಯವು ಕಾರ್ಯಾರಂಭ ಮಾಡಿದೆ.

           ಮೊದಲ ರಾಷ್ಟ್ರೀಯ ಸಹಕಾರ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಹಕಾರವು ರಾಜ್ಯಗಳ ವಿಷಯ ಆಗಿರುವುದರಿಂದ ಕೇಂದ್ರವು ಈ ಹೊಸ ಸಚಿವಾಲಯವನ್ನು ಏಕೆ ಸೃಷ್ಟಿಸಿದೆ ಎನ್ನುವುದು ಹಲವರಿಗೆ ಅಚ್ಚರಿ ಮೂಡಿಸಿದೆ. ಈ ಕ್ಷೇತ್ರವನ್ನು ಬಲಪಡಿಸಲು ಮತ್ತು ಆಧುನೀಕರಣಗೊಳಿಸುವ ಉದ್ದೇಶದಿಂದ ಸಚಿವಾಲಯವನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

          ರಾಜ್ಯಗಳೊಂದಿಗೆ ಸಹಕರಿಸಲಾಗುವುದು. ಯಾವುದೇ ಸಂಘರ್ಷ ಇರುವುದಿಲ್ಲ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.

              ಸಹಕಾರ ಚಳವಳಿ ಹಿಂದೆಂದಿಗಿಂತಲೂ ಇಂದು ಹೆಚ್ಚು ಪ್ರಸ್ತುತವಾಗಿದೆ ಎಂದು ಹೇಳಿದ ಅವರು, ಸಹಕಾರಿ ಸಂಸ್ಥೆಗಳು ದೇಶದ ಅಭಿವೃದ್ಧಿಯಲ್ಲಿ ಸಾಕಷ್ಟು ಕೊಡುಗೆ ನೀಡಬಲ್ಲವು ಎಂದಿದ್ದಾರೆ.

ತೆರಿಗೆ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಸಹಕಾರಿ ಕ್ಷೇತ್ರವು ಎದುರಿಸುತ್ತಿರುವ ಸಮಸ್ಯೆಗಳನ್ನು ಉಲ್ಲೇಖಿಸಿದ ಅವರು, ಸಹಕಾರಿ ಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗುವುದಿಲ್ಲ ಎನ್ನುವ ಭರವಸೆ ನೀಡಿದ್ದಾರೆ.

            ಕೃಷಿ ಸಹಕಾರಿ ಸಂಘಗಳ ಡಿಜಿಟಲೀಕರಣ: ಡಿಜಿಟಲ್‌ ವ್ಯವಸ್ಥೆಯ ಮುಲಕ ಸಾಲ ನೀಡಲು ಅನುಕೂಲ ಆಗುವಂತೆ 98 ಸಾವಿರ ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಡಿಜಿಟಲೀಕರಣ ಮತ್ತು ಆಧುನೀಕರಣಗೊಳಿಸುವ ಕಡೆಗೆ ಕೇಂದ್ರವು ಗಮನ ಹರಿಸಲಿದೆ ಎಂದು ಸಹಕಾರ ಸಚಿವಾಲಯದ ಕಾರ್ಯದರ್ಶಿ ದೇವೇಂದ್ರ ಕುಮಾರ್‌ ಸಿಂಗ್‌ ಹೇಳಿದ್ದಾರೆ.

            ಸಹಕಾರ ಚಳವಳಿ ಮತ್ತು ಸಹಕಾರಿ ಸಂಸ್ಥೆಗಳಿಂದ ತಯಾರಾದ ಗುಣಮಟ್ಟದ ಉತ್ಪನ್ನಗಳನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯಗೊಳಿಸಲು ಕೇಂದ್ರ ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries