HEALTH TIPS

ಜಮ್ಮು-ಕಾಶ್ಮೀರದ ಕೆಲವೆಡೆ ಮತ್ತೆ ನಿರ್ಬಂಧ: ಮೊಬೈಲ್, ಇಂಟರ್‌ನೆಟ್‌ ಸೇವೆ ಸ್ಥಗಿತ

                 ಶ್ರೀನಗರಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರ ನಿಧನದ ನಂತರ ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯುವುದಕ್ಕಾಗಿ ಜಮ್ಮು-ಕಾಶ್ಮೀರದಲ್ಲಿ ಜನರು ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದ್ದು, ಮೊಬೈಲ್ ಫೋನ್, ಇಂಟರ್ನೆಟ್‌ ಸೇವೆಗಳನ್ನೂ ಸ್ಥಗಿತಗೊಳಿಸಲಾಗಿದೆ.

            ಗಿಲಾನಿ ನಿಧನದ ನಂತರ ಅಂತ್ಯಕ್ರಿಯೆ ಪೂರ್ಣಗೊಳ್ಳುವವರೆಗೂ ಕಾಶ್ಮೀರದ ಹಲವು ಕಡೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಮೊಬೈಲ್‌ -ಇಂಟರ್ನೆಟ್‌ ಸೇವೆ ಸ್ಥಗಿತಗೊಳಿಸಲಾಗಿತ್ತು. ನಂತರ, ಶುಕ್ರವಾರ ರಾತ್ರಿ ಈ ಸಂವಹನ ಸೇವೆಗಳನ್ನು ಪುನರ್‌ಸ್ಥಾಪಿಸಲಾಗಿತ್ತು. ಆದರೆ, ಅಹಿತಕರ ಘಟನೆ ನಡೆಯುವ ಸಾಧ್ಯತೆ ಕುರಿತು ಗುಪ್ತಚರ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶನಿವಾರ ಮತ್ತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮೊಬೈಲ್‌, ಇಂಟರ್ನೆಟ್‌ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries