ತಿರುವನಂತಪುರ: ಕಾಂಗ್ರೆಸ್ ಪಕ್ಷಕ್ಕೆ ಹೊಸ ನಾಯಕತ್ವ ಬರಬೇಕು ಎಂದು ತಿರುವನಂತಪುರ ಸಂಸದ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.
'ಸೋನಿಯಾ ಗಾಂಧಿಯ ವಿರುದ್ಧ ಯಾರೂ ಚಕಾರ ಎತ್ತುತ್ತಿಲ್ಲ. ಆದರೆ, ಅವರೇ ಸ್ವತಃ ರಾಜೀನಾಮೆ ನೀಡಲು ಬಯಸಿದ್ದಾರೆ. ಆದ್ದರಿಂದ ಆದಷ್ಟು ಬೇಗನೆ ಹೊಸ ನಾಯಕತ್ವ ಬರಬೇಕು'ಎಂದು ಅವರು ಹೇಳಿದ್ದಾರೆ.
'ರಾಹುಲ್ ಗಾಂಧಿ ಅಧಿಕಾರ ವಹಿಸಿಕೊಳ್ಳಲು ಬಯಸಿದರೆ, ಅದು ಶೀಘ್ರವಾಗಿ ಆಗಬೇಕು' ಎಂದು ಎರ್ನಾಕುಲಂನಲ್ಲಿ ತರೂರ್ ಮಾಧ್ಯಮಗಳಿಗೆ ಹೇಳಿದ್ದಾರೆ.
ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಬೇಕಾದರೆ ಈ ಕೆಲಸಗಳು ಬೇಗನೆ ಆಗಬೇಕು. ನಾವು ಆದಷ್ಟು ಬೇಗ ಚುನಾವಣೆಯನ್ನು ಎದುರಿಸಲು ತಯಾರಾಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ ಪಕ್ಷದ ವಿವಿಧ ಫೀಡರ್ ಸಂಘಟನೆಗಳು ಸಹ ರಾಹುಲ್ ಗಾಂಧಿ ಅವರು, ಪಕ್ಷದ ಹೊಸ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕೆಂದು ದೃಢವಾಗಿ ಒತ್ತಾಯಿಸುತ್ತಿವೆ.
ಕಳೆದ ವರ್ಷ ಪಕ್ಷದಲ್ಲಿ ಮಹತ್ವದ ಬದಲಾವಣೆಗೆ ಒತ್ತಾಯಿಸಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದ 23 ಕಾಂಗ್ರೆಸ್ ನಾಯಕರ ಗುಂಪಿನಲ್ಲಿ ಶಶಿ ತರೂರ್ ಸಹ ಇದ್ದರು.