ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠವು, ‘ದೆಹಲಿ ಸರ್ಕಾರದ ಈ ಮನವಿಯನ್ನು ವಿಚಾರಣೆ ನಡೆಸುವ ವಿಷಯಗಳ ಪಟ್ಟಿಗೆ ಸೇರಿಸಲಾಗುವುದು‘ ಎಂದು ತಿಳಿಸಿತು.
ದೆಹಲಿ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಎ.ಎಂ.ಸಿಂಘ್ವಿ ಅವರು ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಪೀಠವನ್ನು ಕೋರಿದ್ದರು.
ಈ ಕಾಯ್ದೆಯು (ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಕಾಯ್ದೆ 2021) ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ನೀಡಿದ ತೀರ್ಪಿಗೆ ವಿರುದ್ಧವಾಗಿದೆ ಮತ್ತು ಆರ್ಟಿಕಲ್ 239ಎಎಗೆ (ದೆಹಲಿ ಸ್ಥಾನಮಾನಕ್ಕೆ ಸಂಬಂಧಿಸಿದ್ದು ) ವಿರುದ್ಧವಾಗಿದೆ‘ ಎಂದು ವಕೀಲ ಸಿಂಘ್ವಿ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.