ನವದೆಹಲಿ: ದೆಹಲಿಯ ಕಸ್ತೂರಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗುರುವಾರ ನೂತನ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಿದ್ದಾರೆ.
ಹೊಸ ರಕ್ಷಣಾ ಕಚೇರಿಗಳು ಸೇನೆ, ನೌಕಾಪಡೆ ಮತ್ತು ವಾಯುಪಡೆ ಸೇರಿದಂತೆ ರಕ್ಷಣಾ ಸಚಿವಾಲಯ ಮತ್ತು ಸಶಸ್ತ್ರ ಪಡೆಯ ಸುಮಾರು 7,000 ಅಧಿಕಾರಿಗಳಿಗೆ ಸ್ಥಳಾವಕಾಶ ಕಲ್ಪಿಸಲಿವೆ.
: ಗುಜರಾತ್: ಇಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ
ರಕ್ಷಣಾ ಕಚೇರಿಗಳಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಬಳಿಕ ಸೇನೆ, ನೌಕಾಪಡೆ, ವಾಯುಪಡೆ ಮತ್ತು ನಾಗರಿಕ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಶಸ್ತ್ರ ಪಡೆಗಳ ಮುಖ್ಯಸ್ಥರು ಭಾಗಿಯಾಗಿದ್ದಾರೆ.
ನೂತನ ಕಟ್ಟಡಗಳು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರಲಿವೆ.