HEALTH TIPS

ಎಡನೀರು ಶ್ರೀಗಳ ಚಾತುರ್ಮಾಸ್ಯ ಸಂಪನ್ನ

          ಬದಿಯಡ್ಕ: ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ಪ್ರಥಮ ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪ ಕಾರ್ಯಕ್ರಮ ಸೋಮವಾರ ಶ್ರೀಮದ್ ಎಡನೀರು ಮಠದಲ್ಲಿ ನಡೆಯಿತು.


                  ಬೆಳಿಗ್ಗೆ 6 ರಿಂದ 7.30ರ ವರೆಗೆ ಪ್ರಾತಃಕಾಲ ಪೂಜೆ, 8 ರಿಂದ ಮೃತ್ತಿಕಾ ವಿಸರ್ಜನೆ ನಡೆಯಿತು. 10 ರಿಂದ ಎಡನೀರು ಶ್ರೀಗೋಪಾಲಕೃಷ್ಣ ಭಜನಾ ತಂಡದವರಿಂದ ಭಜನಾ ಸಂಕೀರ್ತನೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಡೆಯಿತು. ಅಪರಾಹ್ನ 2 ಕ್ಕೆ ಸೀಮೋಲ್ಲಂಘನ ಸಮಾರಂಭ ಸಾಂಪ್ರದಾಯಿಕ ಶ್ರದ್ದಾ ಭಕ್ತಿಯಿಂದ ನೆರವೇರಿತು. ಬಳಿಕ ಮಂತ್ರಾಕ್ಷತೆ ವಿತರಣೆ ನಡೆಯಿತು. 


              ಮಧ್ಯಾಹ್ನ ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಸಚ್ಚಿದಾನಂದ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿ ಅನುಗ್ರಹ ಪಡೆದರು. ಈ ಸಂದರ್ಭ ಚಾತುರ್ಮಾಸ್ಯ ಸಮಿತಿಯ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries