ತಿರುವನಂತಪುರಂ: ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ತರಗತಿಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಆ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಕಾಲೇಜು ಪ್ರವೇಶಿಸುವ ಮೊದಲು ಎಲ್ಲಾ ವಿದ್ಯಾರ್ಥಿಗಳು ಕೋವಿಡ್ ಲಸಿಕೆಯ ಕನಿಷ್ಠ ಒಂದು ಡೋಸ್ ತೆಗೆದುಕೊಂಡಿರಬೇಕು. ಎರಡನೇ ಡೋಸ್ ಪಡೆಯಲು ಅವಧಿ ಮೀರಿದವರು ಎರಡನೇ ಡೋಸ್ ಲಸಿಕೆಯನ್ನು ಸಹ ಪಡೆಯಬೇಕು. ಲಸಿಕೆ ಪಡೆಯಲು ವಿದ್ಯಾರ್ಥಿಗಳು ಹತ್ತಿರದ ಆರೋಗ್ಯ ಕಾರ್ಯಕರ್ತರು ಅಥವಾ ಆಶಾ ಕಾರ್ಯಕರ್ತರನ್ನು ಸಂಪರ್ಕಿಸಬೇಕು ಎಂದು ಸಚಿವರು ಹೇಳಿದರು.
ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಲಸಿಕೆ ಉಚಿತವಾಗಿ ಲಭ್ಯವಿದೆ. ಕೋವಿಡ್ ಲಸಿಕೆಯನ್ನು ಆಯ್ದ ಖಾಸಗಿ ಆಸ್ಪತ್ರೆಗಳಿಂದ ಸರ್ಕಾರದ ಕಡ್ಡಾಯ ದರದಲ್ಲಿ ಲಭ್ಯವಿದೆ. ಪ್ರಸ್ತುತ ನೀಡಲಾಗುತ್ತಿರುವ ಎರಡು ಲಸಿಕೆಗಳು, ಕೋವ್‍ಶೀಲ್ಡ್ ಮತ್ತು ಕೋವಾಕ್ಸಿನ್ ಗಳಾಗಿದ್ದು, ಕೋವಿಡ್ ವಿರುದ್ಧ ಹೋರಾಡಲು ಅಷ್ಟೇ ಸುರಕ್ಷಿತ ಮತ್ತು ಪರಿಣಾಮಕಾರಿ ಎಮದು ಸಚಿವರು ತಿಳಿಸಿರುವರು.