ಮಂಜೇಶ್ವರ: ಕುಂಜತ್ತೂರು ಹೈಯರ್ ಸೆಕಂಡರಿ ಶಾಲೆಯಲ್ಲಿ 2020 - 21 ನೇ ಸಾಲಿನಲ್ಲಿ ಎ ಪ್ಲಸ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಆನ್ ಲೈನ್ ತರಗತಿಗಳಿಂದ ವಂಚಿತರಾಗುತ್ತಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಆ ಪೈಕಿ ಮೊದಲನೇ ಹಂತವಾಗಿ ಕೊಡುಗೈ ದಾನಿಗಳಿಂದ ಲಭಿಸಿದ ಮೊಬೈಲ್ ಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.
ಕೋವಿಡ್ ಮಾನದಂಡಗಳನ್ನು ಪಾಲಿಸಿ ಪಿಟಿಎ ಅಧ್ಯಕ್ಷ ಯೋಗಿಶ್ ಕೆ. ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಂಜೇಶ್ವರ ಉಪ ಜಿಲ್ಲಾ ವಿದ್ಯಾಧಿಕಾರಿ ದಿನೇಶ್ ರವರು ಉದ್ಘಾಟಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಶಾಲಾ ಅಧ್ಯಾಪಕರುಗಳು, ಪಿಟಿಎ ಪದಾಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥರಿದ್ದರು.