ತಿರುವನಂತಪುರಂ: ಪ್ಲಸ್ ಒನ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ. ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಮವಸ್ತ್ರ ಕಡ್ಡಾಯವಲ್ಲ ಎಂದು ವಿದ್ಯಾರ್ಥಿಗಳಿಗೆ ತಿಳಿಸಲು ಶಾಲೆಗಳಿಗೆ ಸೂಚನೆ ನೀಡಲಾಗುವುದು. ಸಭೆಯಲ್ಲಿ ಪರೀಕ್ಷೆಯ ಸಿದ್ಧತೆಗಳನ್ನು ಕೂಡ ಅವಲೋಕನ ಮಾಡಲಾಯಿತು.
ಪರೀಕ್ಷೆಗಳನ್ನು ಕೊರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ನಡೆಸಬೇಕು. ವಿದ್ಯಾರ್ಥಿಗಳಿಗೆಚ ಏಕ ಪ್ರವೇಶ ದ್ವಾರದ ಮೂಲಕ ಮಾತ್ರ ಶಾಲೆಗೆ ಪ್ರವೇಶಿಸಲು ಅವಕಾಶವಿರುತ್ತದೆ. ದೇಹದ ಉಷ್ಣತೆ ಹೆಚ್ಚಿರುವುದು ಕಂಡುಬಂದರೆ ಅಂತಹ ವಿದ್ಯಾರ್ಥಿಗಳಿಗೆ ಮತ್ತು ನಿರೀಕ್ಷಣೆಯಲ್ಲಿರುವವರಿಗೆ ಪರೀಕ್ಷೆ ಬರೆಯಲು ವಿಶೇಷ ತರಗತಿ ಕೊಠಡಿಗಳನ್ನು ಸ್ಥಾಪಿಸಲಾಗುವುದು. ಸಭೆಯಲ್ಲಿ ಪಿಪಿಇ ಕಿಟ್‍ಗಳನ್ನು ಕೊರೋನಾ ರೋಗ ಹೊಂದಿರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಲಭ್ಯವಾಗುವಂತೆ ಮಾಡಲು ನಿರ್ಧರಿಸಲಾಯಿತು. ತರಗತಿಗಳಲ್ಲಿ ಪೆನ್ನು ಮತ್ತು ಕ್ಯಾಲ್ಕುಲೇಟರ್ ವಿನಿಮಯ ಮಾಡಬಾರದು.
ಏತನ್ಮಧ್ಯೆ, ರಾಜ್ಯದಲ್ಲಿ ಶಾಲೆಗಳನ್ನು ತೆರೆಯಲು ಸಿದ್ಧತೆಗಳನ್ನು ಅವಲೀಕನ ನಡೆಸಲು ಗುರುವಾರ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳ ಸಭೆ ನಡೆಯಲಿದೆ.