ಕಾಸರಗೋಡು: ಕಾರ್ಯಕರ್ತರೊಳಗಿನ ಭಿನ್ನಾಭಿಪ್ರಾಯವನ್ನು ಪಕ್ಷದ ಆಂತರಿಕ ಸಭೆಯಲ್ಲಿ ಪರಿಹರಿಸಿಕೊಳ್ಳುವ ಮೂಲಕ ಪಕ್ಷಕ್ಕಾಗುವ ಹಾನಿ ತಪ್ಪಿಸಲು ಪ್ರತಿಯೊಬ್ಬ ಕಾರ್ಯಕರ್ತ ಶ್ರಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ತಿಳಿಸಿದ್ದಾರೆ.
ಅವರು ಶನಿವಾರ ಡಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪಿ.ಕೆ ಫೈಸಲ್ ಅವರ ಅಧಿಕಾರಾರೋಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜಾತ್ಯತೀತ ವ್ಯವಸ್ಥೆಯನ್ನು ಬಲಪಡಿಸಲು ಕಾಂಗ್ರೆಸ್‍ನಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು. ಡಿಸಿಸಿ ನಿರ್ಗಮಿತ ಅಧ್ಯಕ್ಷ ಹಾಕಿಂ ಕುನ್ನಿಲ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ನೂತನ ಅಧ್ಯಕ್ಷ ಪಿ.ಕೆ ಫೈಸಲ್ ಅವರಿಗೆ ಹಾಕಿಂ ಕುನ್ನಿಲ್ ಅಧಿಕಾರ ಹಸ್ತಂತರಿಸಿದರು. ಶಾಸಕರಾದ ಎನ್.ಎ ನೆಲ್ಲಿಕುನ್ನು, ಎ.ಕೆ.ಎಂ ಅಶ್ರಫ್, ಮುಖಂಡರಾದ ಕೆ.ಪಿ ಕುಞÂಕಣ್ಣನ್, ಸಿ.ಕೆ ಶ್ರೀಧರನ್, ಪಿ.ಎ ಅಶ್ರಫಲಿ, ಎ. ಗೋವಿಂದನ್ ನಾಯರ್, ಡಾ. ಖಾದರ್ ಮಾಙËಡ್ ಉಪಸ್ಥಿತರಿದ್ದರು. ಪಕ್ಷವನ್ನು ತಳಮಟ್ಟದಿಂದ ಕಟ್ಟಿಬೆಳೆಸಲು ಶ್ರಮವಹಿಸುವುದಾಗಿ ತಿಳಿಸಿದರು.