ಡೆಹ್ರಾಡೂನ್: ಉತ್ತರಾಖಂಡ ರಾಜ್ಯಪಾಲೆ ಬೇಬಿ ರಾಣಿ ಮೌರ್ಯ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
'ಬೇಬಿ ರಾಣಿ ಮೌರ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ' ಎಂದು ರಾಜಭವನದ ಅಧಿಕಾರಿಯೊಬ್ಬರು ಹೇಳಿದರು.
ಅಧಿಕಾರ ಅವಧಿ ಪೂರ್ಣಗೊಳ್ಳುವ ಎರಡು ವರ್ಷ ಮೊದಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2018, ಆಗಸ್ಟ್ 6ರಂದು ಬೇಬಿ ರಾಣಿ ಅವರು ಉತ್ತರಾಖಂಡ ರಾಜ್ಯಪಾಲೆಯಾಗಿ ಅಧಿಕಾರ ಸ್ವೀಕರಿಸಿದ್ದರು.