ಉಪ್ಪಳ: ಪೈವಳಿಕೆ ಗ್ರಾ.ಪಂ.ವ್ಯಾಪ್ತಿಯ ಬಾಯಾರು ಕುಟುಂಬ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಇತ್ತೀಚೆಗೆ ಶಿಲಾನ್ಯಾಸ ನಡೆಯಿತು.
ಪೈವಳಿಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಂತಿ ಕೆ. ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಶಿಲಾನ್ಯಾಸ ನೆರವೇರಿಸಿದರು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಪುಷ್ಪಲಕ್ಷ್ಮಿ, ಗ್ರಾ.ಪಂ. ಅಭಿವೃದ್ದಿ ಸ್ಥಾಯೀ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಚಿಪ್ಪಾರ್, ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಜುಲ್ಪಿಕರ್ ಅಲಿ, ಕ್ಷೇಮಕಾರ್ಯಸ್ಥಾಯಿ ಸಮಿತಿ ಅಧ್ಯಕ್ಷೆ ಸಿಯಸುನೀಸ ಹಾಗೂ ಗ್ರಾ.ಪಂ.ಸದಸ್ಯರು, ಎಚ್.ಎಂ.ಸಿ.ಸದಸ್ಯರು, ರಾಜಕೀಯ ನೇತಾರರು, ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಾಯಾರು ಆರೋಗ್ಯ ಕೇಂದ್ರದ ವೈದ್ಯಕೀಯ ಅಧಿಕಾರಿ ಡಾ.ಮುರಳೀಧರ ಕೆ.ಶೆಟ್ಟಿ ಸ್ವಾಗತಿಸಿ, ಆರೋಗ್ಯ ಪರಿವೀಕ್ಷಕ ಸುರೇಶ್ ವಂದಿಸಿದರು. ಲೋಕೋಪಯೋಗಿ ಇಲಾಖೆ ಅಧಿಕಾರಿ ಮೊಹಮ್ಮದ್ ಮುನೀರ್ ವರದಿ ಮಂಡಿಸಿದರು.