ತಿರುವನಂತಪುರಂ: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರ ಆಧಾರದ ಮೇಲೆ, ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆಯನ್ನು ಘೋಷಿಸಲಾಗಿದೆ. ಬುಧವಾರದವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಭಾನುವಾರ- ಕೊಟ್ಟಾಯಂ, ಇಡುಕ್ಕಿ, ಕಣ್ಣೂರು ಮತ್ತು ಕಾಸರಗೋಡು
ಸೋಮವಾರ - ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು
ಮಂಗಳವಾರ - ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು
ಬುಧವಾರ: ಇಡುಕ್ಕಿ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ನೀಡಲಾಗಿದೆ. ಈ ಸ್ಥಳಗಳಲ್ಲಿ 24 ಗಂಟೆಗಳಲ್ಲಿ 64.5 ರಿಂದ 115.5 ಮಿಮೀ ಮಳೆಯಾಗುವ ನಿರೀಕ್ಷೆಯಿದೆ.