ಚಂಡೀಗಡ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.
ಇದೇ ವರ್ಷ ಜುಲೈನಲ್ಲಿ ನವಜೋತ್ ಸಿಂಗ್ ಸಿಧು ಪಕ್ಷದ ಮುಖ್ಯಸ್ಥನಾಗಿ ಅಧಿಕಾರ ವಹಿಸಿದ್ದರು.
'ರಾಜಿಯ ಕಾರಣಗಳಿಂದಾಗಿ ವ್ಯಕ್ತಿಯೊಬ್ಬನ ವ್ಯಕ್ತಿತ್ವದಲ್ಲಿ ಕುಸಿತ ಉಂಟಾಗುತ್ತದೆ. ನಾನು ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ' ಎಂದು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.
' ಈ ವ್ಯಕ್ತಿಗೆ ಸ್ಥಿರತೆ ಇಲ್ಲ...'- ಸಿಧು ರಾಜೀನಾಮೆ ಬಳಿಕ ಅಮರಿಂದರ್ ಪ್ರತಿಕ್ರಿಯೆ
'ಹೀಗಾಗಿ, ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ನನ್ನ ಸೇವೆ ಮುಂದುವರಿಯಲಿದೆ' ಎಂದಿದ್ದಾರೆ.
ಆದರೆ, ಸಿಧು ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಲು ಕಾರಣ ಸ್ಪಷ್ಟವಾಗಿಲ್ಲ.
ಪಂಜಾಬ್ ಕಾಂಗ್ರೆಸ್‌ನಲ್ಲಿನ ಭಿನ್ನಮತ ಶಮನಕ್ಕಾಗಿ ಪಕ್ಷದ ವರಿಷ್ಠರು ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿದರು. ಅನಂತರ ಚರಣ್‌ಜಿತ್ ಸಿಂಗ್ ಚನ್ನಿ ಅವರು ಪಂಜಾಬ್‌ನ 16ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಹುದ್ದೆಗೇರಿದ ದಲಿತ ಸಮುದಾಯದ ಮೊದಲ ವ್ಯಕ್ತಿ ಅವರು. ಸುಖ್‌ಜಿಂದರ್ ಸಿಂಗ್ ರಂಧಾವ ಮತ್ತು ಒ.ಪಿ. ಸೋನಿ ಅವರಿಗೆ ಹೊಸ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಅಮರಿಂದರ್ ಸಿಂಗ್ ನೇತೃತ್ವದ ಸರ್ಕಾರದಲ್ಲಿ ಈ ಇಬ್ಬರೂ ಸಚಿವರಾಗಿದ್ದರು.
ಮುಂದಿನ ವರ್ಷ ಪಂಜಾಬ್ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.