ಕಾಸರಗೋಡು: ಕೋವಿಡ್ ನಿರ್ವಹಣೆಯಲ್ಲಿ ಕೇರಳ ಸರ್ಕಾರ ಸಂಪೂರ್ಣ ಪರಾಜಯ ಹೊಂದಿರುವುದಾಗಿ ಕೆಪಿಸಿಸಿ ಮಾಜಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್ ತಿಳಿಸಿದ್ದಾರೆ.
ಅವರು ಉದುಮ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೊಡಮಾಡಲಾದ ಕಾಂಗ್ರೆಸ್‍ನ ಹಿರಿಯ ಮುಖಂಡ ಕರಿಚ್ಚೇರಿ ನಾರಾಯಣನ್ ಮಾಸ್ಟರ್ ಸ್ಮಾರಕ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು.
ಕೋವಿಡ್ ಸಂಬಂಧ ಸಾವಿನ ಸಂಖ್ಯೆಯಲ್ಲಿ ಸರ್ಕಾರದ ಅಂಕಿ ಅಂಶಗಳಿಂದ ಹೆಚ್ಚಿನ ಸಾವು ಸಂಭವಿಸುತ್ತಿದೆ. ಕೇರಳ ಸರ್ಕಾರ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದು, ಕೋವಿಡ್ ನಿರ್ವಹಣೆ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದಾಗಿ ಆರೋಪಿಸಿದರು.
ಮಾಜಿ ಸಚಿವ ರಮಾನಾಥ ರೈ ಸಮಾರಂಭ ಉದ್ಘಾಟಿಸಿ, ಮುಲ್ಲಪಳ್ಳಿ ರಾಮಚಂದ್ರನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಉದುಮ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ರಾಜನ್ ಪೆರಿಯ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಅಧ್ಯಕ್ಷ ಪಿ.ಕೆ ಫೈಸಲ್, ಕಾಂಗ್ರೆಸ್ ಮುಖಂಡರಾದ ಸಿ.ಕೆ ಶ್ರೀಧರನ್, ಕೆ.ಪಿ ಕುಞÂಕಣ್ಣನ್, ಬಾಲಕೃಷ್ಣನ್ ಪೆರಿಯ, ಎಂ. ಹಸೈನಾರ್, ಡಿಸಿಸಿ ಮಾಜಿ ಅಧ್ಯಕ್ಷ ಹಾಕಿಂ ಕುನ್ನಿಲ್, ಎಂ.ಸಿ ಪ್ರಭಾಕರನ್, ಡಾ. ಖಾದರ್ ಮಾಙËಡ್ ಮುಂತಾದವರು ಉಪಸ್ಥಿತರಿದ್ದರು.