ತಿರುವನಂತಪುರಂ: ಪ್ರವಾಸೋದ್ಯಮ ವಿಭಾಗದಲ್ಲಿ ಕಾರವಾನ್ ಪ್ರವಾಸೋದ್ಯಮ ಯೋಜನೆಯನ್ನು ಪರಿಚಯಿಸಲಾಗುತ್ತಿದೆ. ಈ ಯೋಜನೆಯನ್ನು ಪ್ರವಾಸೋದ್ಯಮ ಸಚಿವ ಪಿಎ ಮೊಹಮ್ಮದ್ ರಿಯಾಜ್ ಘೋಷಿಸಿರುವರು. ಪ್ರವಾಸೋದ್ಯಮ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾರವಾನ್ ಪ್ರವಾಸೋದ್ಯಮವನ್ನು ಆರಂಭಿಸಲಾಗಿದೆ ಎಂದು ಸಚಿವರು ಹೇಳಿದರು.
ಪ್ರವಾಸೋದ್ಯಮ ಕೇಂದ್ರದಲ್ಲಿ ಸೌಲಭ್ಯಗಳನ್ನು ಒಂದೇ ವಾಹನದಲ್ಲಿ ಸಿದ್ದಪಡಿಸುವ ಚಿಂತನೆ ಈ ಯೋಜನೆಯದು. ಹಗಲು ಪ್ರಯಾಣ ಮತ್ತು ರಾತ್ರಿ ವಿಶ್ರಾಂತಿಯ ರೂಪದಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುವುದು.
ಕಾರವಾನ್ ಸಾಕಷ್ಟು ಸೌಲಭ್ಯಗಳನ್ನು ಹೊಂದಿದೆ. ಇದು ಇಂಟರ್ನೆಟ್ ಸೇರಿದಂತೆ ಸೌಲಭ್ಯಗಳನ್ನು ಹೊಂದಿರುತ್ತದೆ.
ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಗಳಿಗೆ ಸಂಪೂರ್ಣವಾಗಿ ಲಸಿಕೆ ಹಾಕಲು ಯೋಜಿಸುತ್ತಿದೆ. ಕ್ಯಾಂಪಿಂಗ್, ಟ್ರೆಕ್ಕಿಂಗ್ ಮತ್ತು ವಸತಿ ಲಭ್ಯವಿಲ್ಲದ ಸ್ಥಳಗಳಲ್ಲಿ ಕಾರವಾನ್ ಪ್ರವಾಸೋದ್ಯಮದ ಸಾಮಥ್ರ್ಯವು ಮುಂಬರುವ ವರ್ಷಗಳಲ್ಲಿ ಉತ್ತಮ ಸಾಧ್ಯತೆÉಯಾಗಿದೆ ಎಂದು ಸಚಿವರು ಹೇಳಿದರು.