ನವದೆಹಲಿ: 'ದೇಶದಲ್ಲಿ ಸೆಪ್ಟೆಂಬರ್‌ನಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆ ಸುರಿಯಲಿದೆ' ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರ ಅವರು ಈ ವಿಷಯ ತಿಳಿಸಿದ್ದಾರೆ.
'ಜೂನ್‌ನಲ್ಲಿ ದೇಶದಲ್ಲಿ ವಾಡಿಕೆ ಮಳೆಗಿಂತ ಶೇ 10 ರಷ್ಟು ಹೆಚ್ಚಾಗಿ ಸುರಿದಿದೆ. ಇನ್ನು ಸೆಪ್ಟೆಂಬರ್‌ನಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಇರಲಿದ್ದು, ಅದರ ಪ್ರಮಾಣ ಶೇ 96 ರಿಂದ ಶೇ 104 ರ ಆಸುಪಾಸಿನಲ್ಲಿ ಇರಲಿದೆ' ಎಂದು ತಿಳಿಸಿದ್ದಾರೆ.
'ದೇಶದಲ್ಲಿ ಈ ವರ್ಷ ಉತ್ತಮ ಮುಂಗಾರು ಮಳೆಯಾಗಿದ್ದು, ಕೋಟ್ಯಂತರ ರೈತರಿಗೆ ಅನುಕೂಲ ಆಗಿದೆ' ಎಂದು ಮೃತ್ಯುಂಜಯ ಮೋಹಪಾತ್ರ ಹೇಳಿದ್ದಾರೆ.