ಪಥನಂತಿಟ್ಟ: ವಿಶ್ವವಿಖ್ಯಾತ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿ ಶಬರಿಮಲೆ ವಾರ್ಷಿಕ ತೀರ್ಥಯಾತ್ರೆಯ ಸಮಯದಲ್ಲಿ ಕೊರೊನಾ ವೈರಸ್ ಸೋಂಕು ಕಾರಣದಿಂದಾಗಿ ಪ್ರತಿದಿನ ಕೇವಲ 25 ಸಾವಿರ ಭಕ್ತರಿಗೆ ದರ್ಶನ ಪಡೆಯಲು ಮಾತ್ರ ಅವಕಾಶ ನೀಡಲಾಗಿದೆ. ಈ ನಡುವೆ ಸುಮಾರು ಹತ್ತು ಲಕ್ಷಕ್ಕೂ ಅಧಿಕ ಜನರು ಈಗಲೇ ನೊಂದಾವಣಿ ಮಾಡಿಕೊಂಡಿದ್ದಾರೆ ಎಂದು ವರದಿಯು ಹೇಳಿದೆ. ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿನ ವ್ಯವಸ್ಥೆಗಳ ಅವಲೋಕನವನ್ನು ಮಾಡುವ ನಿಟ್ಟಿನಲ್ಲಿ ಸಮೀಪದ ಪಂಬಾದಲ್ಲಿ ನಡೆದ ಉನ್ನತ ಮಟ್ಟದ ಮೌಲ್ಯಮಾಪನ ಸಭೆಯ ಬಳಿಕ ಕೇರಳ ದೇವಸ್ವಂ ಸಚಿವ ಕೆ ರಾಧಾಕೃಷ್ಣನ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಕೇರಳ ದೇವಸ್ವಂ ಸಚಿವ ಕೆ ರಾಧಾಕೃಷ್ಣನ್ ಪ್ರಕಾರ, "ಶಬರಿಮಲೆ ವಾರ್ಷಿಕ ತೀರ್ಥಯಾತ್ರೆಗೆ ಈ ವರ್ಷ ದಿನಕ್ಕೆ 25 ಸಾವಿರ ಭಕ್ತರಿಗೆ ದರ್ಶನ ಪಡೆಯಲು ಅವಕಾಶ ನೀಡುವ ಮೂಲಕ ಒಟ್ಟು 15.25 ಲಕ್ಷ ಜನರಿಗೆ ದೇವರ ದರ್ಶನ ಪಡೆಯಲು ಅವಕಾಶ ನೀಡಬಹುದು."
ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಕೇರಳ ದೇವಸ್ವಂ ಸಚಿವ ಕೆ ರಾಧಾಕೃಷ್ಣನ್, "ಕಾಲಮಿತಿಯ ವಿಧಾನದಲ್ಲಿ ಭಕ್ತರ ಆಗಮನಕ್ಕೆ ಅವಕಾಶವನ್ನು ನೀಡುವ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತದೆ. ಕೊರೊನಾ ವೈರಸ್ ಸೋಂಕು ಕಾರಣದಿಂದಾಗಿ ಈ ವರ್ಷವೂ ಕೂಡಾ ಶಬರಿಮಲೆ ವಾರ್ಷಿಕ ತೀರ್ಥಯಾತ್ರೆಗೆ ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಮಾಡಲಾಗಿದೆ. ನಾವು ದೇವಾಲಯಕ್ಕೆ ಪ್ರತಿದಿನ ಆಗಮಿಸುವ ಭಕ್ತರ ಸಂಖ್ಯೆಯನ್ನು 25,000 ಕ್ಕೆ ನಿಗದಿ ಮಾಡಿದ್ದೇವೆ. ಈಗಾಗಲೇ ಹತ್ತು ಲಕ್ಷ ಭಕ್ತರು ನೋಂದಾವಣಿ ಮಾಡಿಕೊಂಡಿದ್ದಾರೆ," ಎಂದು ತಿಳಿಸಿದರು.470 ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ "ಈ ವರ್ಷ ಶಬರಿಮಲೆ ವಾರ್ಷಿಕ ತೀರ್ಥಯಾತ್ರೆ ಸಂದರ್ಭದಲ್ಲಿ ಸುಮಾರು 470 ಕೆಎಸ್‌ಆರ್‌ಟಿಸಿ ಬಸ್‌ಗಳು ಕಾರ್ಯ ನಿರ್ವಹಣೆ ಮಾಡಲಿದೆ. ಈ ಪೈಕಿ 140 ಕೆಎಸ್‌ಆರ್‌ಟಿಸಿ ಬಸ್‌ಗಳು ನೀಲಕಲ್ ಮತ್ತು ಪಂಬಾ ಮೂಲ ಶಿಬಿರಗಳಿಂದ ಕರೆದೊಯ್ಯುವ ಕರೆತರುವ ಕಾರ್ಯವನ್ನು ಮಾಡಲಿದೆ. ಇದು ಚೈನ್ ಸರ್ವೀಸ್‌ನಂತೆ ನಡೆಯಲಿದೆ," ಎಂದು ಕೇರಳ ದೇವಸ್ವಂ ಸಚಿವ ಕೆ ರಾಧಾಕೃಷ್ಣನ್ ವಿವರಿಸಿದರು. "ನೀಲಕಲ್‌ನಲ್ಲಿ ಆರೋಗ್ಯ ಇಲಾಖೆಯು ಕೋವಿಡ್ ಪರೀಕ್ಷಾ ಕೇಂದ್ರವನ್ನು ಸ್ಥಾಪನೆ ಮಾಡಲಿದೆ. ಪಂಬಾ, ಸನ್ನಿಧಾನ ಹಾಗೂ ನೀಲಕಲ್‌ನಲ್ಲಿ ಆಸ್ಪತ್ರೆಯು ಕಾರ್ಯ ನಿರ್ವಹಿಸಲು ಆರಂಭ ಮಾಡುತ್ತದೆ. ಅಲ್ಲಿ ಐದು ತುರ್ತು ಮೆಡಿಕಲ್ ಕೇಂದ್ರಗಳು ಕೂಡಾ ಸ್ಥಾಪನೆ ಮಾಡಲಾಗುತ್ತದೆ," ಎಂದು ಸಚಿವರು ಹೇಳಿದರು.
ಬೇರೆ ಬೇರೆ ಸರ್ಕಾರಿ ಇಲಾಖೆಗಳು ಜೊತೆಯಾಗಿ ಜಂಟಿ ಕ್ರಿಯಾ ಯೋಜನೆಯನ್ನು ಮಾಡಿಕೊಂಡು ಅದನ್ನು ಶಬರಿಮಲೆ ವಾರ್ಷಿಕ ತೀರ್ಥಯಾತ್ರೆ ಆರಂಭಕ್ಕೂ ಮುನ್ನ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ದೇವಸ್ವಂ ಸಚಿವ ಕೆ ರಾಧಾಕೃಷ್ಣನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಡುವೆ ಆರೋಗ್ಯ ಇಲಾಖೆಯು ಕ್ರಿಯಾ ಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, "ಕೊರೊನಾ ವೈರಸ್ ಸೋಂಕು ಹಿನ್ನೆಲೆ ಎಲ್ಲಾ ಜಾಗರೂಕ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಈ ಕ್ರಿಯಾ ಯೋಜನೆಯನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತುರ್ತು ಔಷಾಧಾಲಯ, ಆಕ್ಸಿಜನ್ ವ್ಯವಸ್ಥೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸಲ್ಲಿಕೆ ಮಾಡಿದ ಈ ಕ್ರಿಯಾ ಯೋಜನೆಯ ಪ್ರಕಾರ ಎಲ್ಲಾ ಯಾತ್ರಾರ್ಥಿಗಳು ಹಾಗೂ ಸಿಬ್ಬಂದಿಗಳು ಕೋವಿಡ್ ಲಸಿಕೆಯನ್ನು ಪಡೆದುಕೊಂಡ ಹಾಗೂ 72 ಗಂಟೆಯೊಳಗೆ ಮಾಡಿದ ಆರ್‌ಟಿ-ಪಿಸಿಆರ್ ಪರೀಕ್ಷೆಯ ವರದಿಯನ್ನು ಹೊಂದಿರಬೇಕು. "ತುರ್ತು ಔಷಾಧಾಲಯ ಹಾಗೂ ಆಕ್ಸಿಜನ್ ವ್ಯವಸ್ಥೆಯನ್ನು ಪಂಬಾ ಹಾಗೂ ಸನ್ನಿಧಾನದ ಮಾರ್ಗ ಮಧ್ಯದಲ್ಲಿ ಐದು ಕಡೆಗಳಲ್ಲಿ ಸ್ಥಾಪನೆ ಮಾಡಲಾಗಿದೆ. ಈ ಔಷಧಾಲಯದಲ್ಲಿ ಪ್ರಾಥಮಿಕ ಚಿಕಿತ್ಸೆ, ರಕ್ತದೊತ್ತಡ (ಬಿಪಿ) ಪರೀಕ್ಷೆ ಹೃದಯಾಘಾತದ ಅಪಾಯವನ್ನು ಎದುರಿಸುತ್ತಿರುವವರಿಗೆ ಅಗತ್ಯ ಚಿಕಿತ್ಸೆಯನ್ನು ನೀಡುವ ವ್ಯವಸ್ಥೆಯನ್ನು ಹೊಂದಿರುತ್ತದೆ," ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಬಳಿಕ ಶಬರಿಮಲೆ ಯಾತ್ರೆಯಲ್ಲಿ ಸರ್ಕಾರವು ನಿಯಮಗಳನ್ನು ಜಾರಿ ಮಾಡಿದೆ. ಕಳೆದ ವರ್ಷವೂ ಕೂಡಾ ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆಗೆ ಮಿತಿಯನ್ನು ಹೇರಲಾಗಿತ್ತು.