ತಿರುವನಂತಪುರಂ: ಕೇರಳದಲ್ಲಿ ನಾಳೆಯಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬುಧವಾರದಿಂದ ಶುಕ್ರವಾರದವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಸೂಚನೆಯಂತೆ ಪೂರ್ವದಿಂದ ಗಾಳಿ ಸಹಿತ ಹೆಚ್ಚು ಮಳೆ ನಿರೀಕ್ಷೆ ಇದೆ.
ಬುಧವಾರದಿಂದ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬುಧವಾರ 11 ಜಿಲ್ಲೆಗಳು, ಗುರುವಾರ 12 ಜಿಲ್ಲೆಗಳು ಮತ್ತು ಶುಕ್ರವಾರ 13 ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆಯನ್ನು ನೀಡಲಾಗಿದೆ. ಈ ದಿನಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದ ಕಡಲತೀರದಿಂದ ಮೀನುಗಾರಿಕೆಗೆ ಹೋಗದಂತೆ ಸೂಚಿಸಲಾಗಿದೆ.
ಯೆಲ್ಲೋ ಅಲರ್ಟ್ ಪ್ರಕಟಣೆಯ ವಿವರಗಳು:
20-10-21 ಬುಧವಾರ: ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್
21-10-21 ಗುರುವಾರ: ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡ್.
22-10-21 ಶುಕ್ರವಾರ: ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು