ನವದೆಹಲಿ: ಕೋವಿಡ್ 19 ಸಾಂಕ್ರಾಮಿಕದಿಂದಾಗಿ ರದ್ದುಗೊಳಿಸಲಾದ 12ನೇ ತರಗತಿಯ ಪರೀಕ್ಷೆಯ ಫಲಿತಾಂಶಕ್ಕೆ ಸಂಬಂಧಿಸಿದ ವಿವಾದ ಪರಿಹಾರದ ಕಾರ್ಯವಿಧಾನ ಸರಿಯಾಗಿ ಅನುಷ್ಠಾನಗೊಳಿಸಲು ವಿಫಲವಾಗಿರುವ ಆರೋಪ ಎದುರಿಸುತ್ತಿರುವ ಸಿಬಿಎಸ್‌ಇಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಸಿ.ಟಿ. ರವಿಕುಮಾರ್ ಅವರಿರುವ ಪೀಠ ಈ ಸಂಬಂಧದ ಅರ್ಜಿಗಳು ವಿಚಾರಣೆ ನಡೆಸಿತು. ಅಕ್ಟೋಬರ್ 20ಕ್ಕೆ ವಿಚಾರಣೆ ಮುಂದೂಡಿದ ಪೀಠವು, ಅ.18 ಅಥವಾ ಅದಕ್ಕೂ ಮೊದಲು ಪ್ರತಿಕ್ರಿಯೆ ಸಲ್ಲಿಸುವಂತೆ ವಕೀಲರಿಗೆ ಸೂಚಿಸಿತು.