ನವದೆಹಲಿ: ಪೆಟ್ರೋಲಿಯಂ ಕಂಪೆನಿಗಳು ಇಂಧನ ಬೆಲೆ ಏರಿಕೆ ಮಾಡುತ್ತಿದ್ದಂತೆ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ ಬುಧವಾರ 15 ರೂಪಾಯಿ ಏರಿಕೆ ಮಾಡಿವೆ. ನೂತನ ದರ ದೇಶಾದ್ಯಂತ ಇಂದೇ ಜಾರಿಗೆ ಬರಲಿದೆ.
ಈ ಮೂಲಕ ಸಬ್ಸಿಡಿಯೇತರ ಅಡುಗೆ ಅನಿಲ ಸಿಲಿಂಡರ್ ದರ ರಾಜಧಾನಿ ದೆಹಲಿಯಲ್ಲಿ 14.2 ಕೆಜಿಗೆ 899 ರೂಪಾಯಿ 50 ಪೈಸೆಯಾಗಿದೆ. 5 ಕೆಜಿ ಸಿಲಿಂಡರ್ ಬೆಲೆ 502 ರೂಪಾಯಿಯಾಗಿದೆ.
ಕಳೆದ ಅಕ್ಟೋಬರ್ 1ರಂದು ಪೆಟ್ರೋಲಿಯಂ ಕಂಪೆನಿಗಳು ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 43 ರೂಪಾಯಿ 5 ಪೈಸೆಯಷ್ಟು ಹೆಚ್ಚಳ ಮಾಡಿದ್ದವು. ಇದೀಗ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ ಹೆಚ್ಚಿಸುವ ಮೂಲಕ ಗ್ರಾಹಕರಿಗೆ ಮತ್ತಷ್ಟು ಶಾಕ್ ನೀಡಿದೆ. ಕಳೆದ ಎರಡು ತಿಂಗಳಲ್ಲಿ ಅಡುಗೆ ಅನಿಲ ಏರಿಕೆಯಾಗುತ್ತಿರುವುದು ಇದು ನಾಲ್ಕನೇ ಬಾರಿ.