ನವದೆಹಲಿ: ಭಾರತವು ಅಕ್ಟೋಬರ್ 15ರಿಂದ ಪ್ರವಾಸಿ ವೀಸಾ ನೀಡಲು ಮುಂದಾಗಿದೆ. ಅಕ್ಟೋಬರ್ 15ರಿಂದ ಚಾರ್ಟರ್ಡ್ ವಿಮಾನಗಳ ಮೂಲಕ ಬರುವ ವಿದೇಶಿಯರಿಗೆ ಪ್ರವಾಸಿ ವೀಸಾವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಗುರುವಾರ ಈ ಬಗ್ಗೆ ಮಾಹಿತಿ ನೀಡಿದ್ದು, ಅಕ್ಟೋಬರ್ 15ರಿಂದ ಚಾರ್ಟರ್ಡ್ ವಿಮಾನಗಳ ಮೂಲಕ ಭಾರತಕ್ಕೆ ಬರುವ ವಿದೇಶಿಯರಿಗೆ ಹೊಸ ಪ್ರವಾಸಿ ವೀಸಾಗಳನ್ನು ನೀಡಲು ಆರಂಭಿಸುವುದಾಗಿ ತಿಳಿಸಿದೆ. ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ವಿಮಾನಯಾನ ಸಂಸ್ಥೆಗಳು ಸರ್ಕಾರವನ್ನು ವಿನಂತಿಸಿವೆ.
ಚಾರ್ಟರ್ಡ್ ವಿಮಾನವನ್ನು ಹೊರತುಪಡಿಸಿ ಬೇರೆ ವಿಮಾನಗಳ ಮೂಲಕ ಭಾರತಕ್ಕೆ ಪ್ರಯಾಣಿಸುವ ವಿದೇಶಿ ಪ್ರವಾಸಿಗರು ನವೆಂಬರ್ 15ರಿಂದ ಎಲ್ಲಾ ಕೋವಿಡ್ ಪ್ರೋಟೋಕಾಲ್‌ಗಳಿಗೆ ಅನುಸಾರವಾಗಿ ವೀಸಾ ನೀಡಲು ಸಾಧ್ಯವಾಗುತ್ತದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಇತರೆ ವಿಮಾನಗಳ ಮೂಲಕ ಭಾರತಕ್ಕೆ ಬರುವವರಿಗೆ ನವೆಂಬರ್ 15ರ ಬಳಿಕ ವೀಸಾ ನೀಡಲಾಗುವುದು ಎಂದು ಹೇಳಿದೆ. ಚಳಿಗಾಲ ಆರಂಭವಾದ ಬಳಿಕ ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾರತಕ್ಕೆ ಭೇಟಿ ನೀಡುತ್ತಾರೆ. ಅದರಲ್ಲೂ ಗೋವಾದ ತೀರಗಳು ವಿದೇಶಿ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ.
ದೇಶದಲ್ಲಿ ಕಳೆದ ಮಾರ್ಚ್‌ನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಿದ್ದವು, ಈ ಕಾಣದಿಂದ ವಿದೇಶಿ ಪ್ರವಾಸಿಗರ ಭೇಟಿಗೆ ಅವಕಾಶ ನೀಡಿರಲಿಲ್ಲ. ಈಗ ಪ್ರವಾಸೋದ್ಯಮಕ್ಕೆ ಪುನಶ್ಚೇತನ ನೀಡಲು ಸರ್ಕಾರ ಮುಂದಾಗಿದೆ.
ಕೊರೊನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 22,431 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 318 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,38,94,312ಕ್ಕೆ ತಲುಪಿದ್ದು, 4,49,856ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,44,198ಕ್ಕೆ ತಲುಪಿದೆ. 2020ರ ಏಪ್ರಿಲ್ 16ರವರೆಗೆ ವಿಸ್ತರಿಸಲಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 29,639 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,32,00,258ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 11,41,642 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 57,53,94,042 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.