HEALTH TIPS

ಭಾರತದಲ್ಲಿ ಕೊವಿಡ್-19 ಲಸಿಕೆಗೆ ಆಧಾರ್ ಕಾರ್ಡ್ ಕಡ್ಡಾಯವೇ?

                ನವದೆಹಲಿ: ಭಾರತದಲ್ಲಿ ಕೊರೊನಾವೈರಸ್ ಲಸಿಕೆಯನ್ನು ಪಡೆದುಕೊಳ್ಳಬೇಕಾದರೆ CO-WIN ಪೋರ್ಟಲ್‌ನಲ್ಲಿ ಆಧಾರ್ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂಬ ಷರತ್ತು ತೆಗೆದು ಹಾಕುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.


                  ಪುಣೆ ಮೂಲದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸಿದ್ಧಾರ್ಥ ಶಂಕರ್ ಶರ್ಮಾ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಕೇಂದ್ರ ಸರ್ಕಾರ ಮತ್ತು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರಕ್ಕೆ (UIDAI) ನೋಟಿಸ್ ಜಾರಿಗೊಳಿಸಿದೆ.

            ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW), ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಪ್ರತಿಕ್ರಿಯೆ ಕೇಳಲಾಗಿದೆ. ಪಿಐಎಲ್ ಮನವಿಗೆ ಪರಿಹಾರವಾಗಿ ಕೋ-ವಿನ್ ಪೋರ್ಟಲ್‌ಗೆ ಅಗತ್ಯ ಬದಲಾವಣೆಗಳನ್ನು ಮಾಡಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಕೋ-ವಿನ್ ಪೋರ್ಟಲ್ ಅನ್ನು ಸೂಕ್ತ ಸಾಫ್ಟ್‌ವೇರ್ ಮತ್ತು ತಾಂತ್ರಿಕ ಜ್ಞಾನದೊಂದಿಗೆ ನವೀಕರಿಸಲು ಕೇಂದ್ರದಿಂದ ನಿರ್ದೇಶನವನ್ನು ಕೋರಿಲಾಗಿದೆ. ಇದರಿಂದ ಸಾರ್ವಜನಿಕರಿಗೆ ಬಳಸಲು ಸುಲಭ ಹಾಗೂ ಎಲ್ಲ ನಾಗರಿಕರಗೆ ಸೂಕ್ತ ಮತ್ತು ಬಳಕೆದಾರ ಸ್ನೇಹಿ ಆಗಿರಲಿದೆ.

                                     ಯಾವುದೇ ಗುರುತಿನ ಚೀಟಿ ಇಲ್ಲದವರಿಗೆ ಲಸಿಕೆ:

               ಕೊರೊನಾವೈರಸ್ ಲಸಿಕೆ ನೀಡುವುದಕ್ಕೆ ಗುರುತಿನ ಏಕೈಕ ಪುರಾವೆಯಾಗಿ ಆಧಾರ್ ಕಾರ್ಡ್ ಅನ್ನು ಒದಗಿಸಲು ಅಧಿಕಾರಿಗಳು ಒತ್ತಾಯಿಸಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಪ್ರಾಯೋಗಿಕ ಕ್ರಮಗಳಿಗೆ ವಿರುದ್ಧವಾಗಿ ಇತ್ತೀಚೆಗೆ ಮತ್ತೊಂದು ಪ್ರಮಾಣಿತ ಆಪರೇಟಿಂಗ್ ಪ್ರೊಸೀಜರ್ (SOP) ಮಾರ್ಗಸೂಚಿ ಹೊರಡಿಸಿದ್ದು, ಇದರಲ್ಲಿ ಯಾವುದೇ ನಿಗದಿತ ಏಳು ಫೋಟೋ ಗುರುತಿನ ಚೀಟಿಗಳನ್ನು ಹೊಂದಿಲ್ಲದ ವ್ಯಕ್ತಿಗಳಿಗೂ ಲಸಿಕೆ ಹಾಕುವಂತೆ ನಿರ್ದೇಶಿಸಲಾಗಿದೆ. ಈ ಕುರಿತು ಕೋವಿನ್ ಪೋರ್ಟಲ್‌ನಲ್ಲಿ ಉಲ್ಲೇಖಿಸಲಾಗಿದೆ.

                                  ಕಾಗದಗಳಲ್ಲಷ್ಟೇ ಆರೋಗ್ಯ ಸಚಿವಾಲಯದ ನೀತಿ?:

               ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇಂತಹ ಶ್ಲಾಘನೀಯ ನೀತಿಗಳನ್ನು ಕಾಗದದ ಮೇಲೆ ರೂಪಿಸಲಾಗುತ್ತಿದೆಯಾದರೂ, ವ್ಯಾಕ್ಸಿನೇಟರ್ ಪ್ರವೇಶ ಪುಟದಲ್ಲಿ ಅದು ಪಾಲನೆ ಆಗುತ್ತಿಲ್ಲ. ಕೊವಿಡ್-19 ಲಸಿಕೆ ನೀಡುವ ಮೊದಲು ದೃಢೀಕರಣ ಹಂತದಲ್ಲಿ ಆಧಾರ್ ವಿವರಗಳನ್ನು ಕಡ್ಡಾಯಗೊಳಿಸಲಾಗಿದೆ. ಇಂಥ ನಡವಳಿಕೆಯು ಸರ್ಕಾರದ ನೀತಿಗಳ ಮೇಲೆ ಅನುಮಾನವನ್ನು ಹುಟ್ಟಿಸುವಂತಿವೆ," ಎಂದು ಮನವಿಯಲ್ಲಿ ಹೇಳಲಾಗಿದೆ.

           ಕೊರೊನಾವೈರಸ್ ಲಸಿಕೆ ಹಂತಗಳು ಎಷ್ಟಿದೆ?:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

                                      ಭಾರತದಲ್ಲಿ 258 ದಿನಗಳಲ್ಲಿ ಲಸಿಕೆ ಪಡೆದವರ ಪ್ರಮಾಣ?:

              ಭಾರತದಲ್ಲಿ ಕಳೆದ ಗುರುವಾರ ರಾತ್ರಿ 7 ಗಂಟೆ ವೇಳೆಗೆ 58,80,843 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 258 ದಿನಗಳಾಗಿದ್ದು, 88.28 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 88,96,14,483 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದ್ದು, 64,98,28,333 ಮಂದಿಗೆ ಮೊದಲ ಡೋಸ್ ಹಾಗೂ 23,97,86,150 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೂ 87,25,58,985 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries