ಮಧೂರು: ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ನೇತೃತ್ವದಲ್ಲಿ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ನ.1ರಂದು ಬೆಳಗ್ಗೆ 10 ಗಂಟೆಗೆ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಕನ್ನಡ ಪ್ರತಿಜ್ಞೆ, ಕಾಸರಗೋಡು-ಕರ್ನಾಟಕದ ಹಿರಿಯ ಯುವ ಗಾಯಕರಿಂದ ಕನ್ನಡ ರಾಜ್ಯೋತ್ಸವ ಗೀತಾ ಗಾಯನ ನಡೆಯಲಿದೆ.